fbpx
ಸಮಾಚಾರ

“ನನ್ನ ಪದವಿ ಹೋದರು ಪರವಾಗಿಲ್ಲ, ನ್ಯಾಯಾಂಗ ಉಳಿಯಬೇಕು” ಭ್ರಷ್ಟಾಚಾರದ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್‌.ಪಿ.ಸಂದೇಶ್ ದಿಟ್ಟ ನುಡಿ

ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಭ್ರಷ್ಟಾಚಾರ ನಿಗ್ರಹದಳದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಸೀಮಂತ್‌ ಕುಮಾರ್‌ ಸಿಂಗ್‌ ವಿರುದ್ಧ ಕಿಡಿಕಾರಿದ್ದಾರೆ. ಈ ಹಿಂದೆ ಎಸಿಬಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿ ನ್ಯಾ. ಸಂದೇಶ್‌ ಉಲ್ಲೇಖಿಸಿದ್ದರು, ಈಗ ಅವರನ್ನೇ ವರ್ಗಾವಣೆ ಮಾಡಿಸಬಹುದು ಎಂದು ಬೆದರಿಕೆ ಬಂದಿದೆ ಎಂದವರು ಹೇಳಿಕೊಂಡಿದ್ದಾರೆ.

ಹೈಕೋರ್ಟ್​ನಲ್ಲಿ ಸೋಮವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಿರುದ್ಧದ ಲಂಚ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಸಭಾಂಗಣದಲ್ಲೇ ತಮಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಬಂದಿರುವ ವಿಚಾರ ತಿಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವರ್ಗಾವಣೆ ಬೆದರಿಕೆ ಎದುರಿಸಲು ಸಿದ್ಧವಿರುವುದಾಗಿ ಹೇಳಿದರು.

“ನನ್ನನ್ನೇ ವರ್ಗಾವಣೆ ಮಾಡುತ್ತೀನಿ ಎಂಬ ಬೆದರಿಕೆ ಬಂದಿದೆ. ನಾನು ಈ ಬೆದರಿಕೆಯನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನ್ನನ್ನು ವರ್ಗಾವಣೆ ಮಾಡಲಿ. ಎಸಿಬಿ ಎಡಿಜಿಪಿ ತುಂಬಾ ಪವರ್‌ಫುಲ್‌ ಆಗಿದ್ದಾರಂತೆ. ಒಬ್ಬ ವ್ಯಕ್ತಿ ಇದನ್ನು ನನಗೆ ತಿಳಿಸಿದ್ಧಾರೆ. ನಾನು ರೈತನ ಮಗ, ಸಮಾಜದ ಸ್ವಾಸ್ಥ್ಯಕ್ಕಾಗಿ ಹೋರಾಡುತ್ತೇನೆ. ವರ್ಗಾವಣೆ ಅಥವಾ ನನ್ನ ಜವಾಬ್ದಾರಿಯಿಂದ ತೆಗೆದರೆ, ನಾನು ಉಳುಮೆ ಮಾಡಲೂ ಸಿದ್ಧನಿದ್ದೇನೆ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೆ ಬದ್ಧನಾಗಿಲ್ಲ,” ಎಂದು ಎಚ್‌ ಪಿ ಸಂದೇಶ್‌ ಬೆಂಗಳೂರು ನಗರ ಡಿಸಿ ಲಂಚ ಪ್ರಕರಣದ ವಿಚಾರಣೆ ವೇಳೆ ಹೇಳಿದ್ದಾರೆ.

 

 

ವರ್ಗಾವಣೆ ಮಾಡಿಸುವ ಬೆದರಿಕೆಯನ್ನೂ ಆದೇಶದಲ್ಲಿ ಬರೆಸುತ್ತೇನೆ. ನನಗೆ ಯಾರ ಹೆದರಿಕೆ ಇಲ್ಲ, ಬೆಕ್ಕಿಗೆ ಗಂಟೆ ಕಟ್ಟಲು ಸಿದ್ದನಿದ್ದೇನೆ. ಜಡ್ಜ್ ಆದ ಮೇಲೆ ನಾನು ಒಂದಿಂಚೂ ಆಸ್ತಿ ಮಾಡಿಲ್ಲ. ನನ್ನ ಜಡ್ಜ್ ಹುದ್ದೆ ಹೋದರೂ ಚಿಂತೆ ಮಾಡುವುದಿಲ್ಲ. ನಾನು ರೈತನ ಮಗ, ಭೂಮಿ ಉಳುಮೆ ಮಾಡಲೂ ಸಿದ್ದನಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿಲ್ಲ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೂ ಬದ್ದನಾಗಿಲ್ಲ ಎಂದೂ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಸ್ಪಷ್ಟಪಡಿಸಿದ್ದಾರೆ.

ಕಳೆದ ಜೂ.29ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಎಸಿಬಿ ಕಚೇರಿಗಳು ‘ವಸೂಲಿ ಕೇಂದ್ರ’ಗಳಾಗಿವೆ. ಸ್ವತಃ ಎಸಿಬಿ ಎಡಿಜಿಪಿ ಕಳಂಕಿತ ಅಧಿಕಾರಿಯಾಗಿದ್ದಾರೆ. ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ಹಿಡಿಯುವುದನ್ನು ಬಿಟ್ಟು ಗುಮಾಸ್ತರನ್ನು ಬಂಧಿಸಲಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಎಸಿಬಿ ಸ್ಥಾಪನೆಗೊಂಡ ದಿನದಿಂದ ಈವರೆಗೆ ಎಷ್ಟು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ? ಎಷ್ಟು ಬಿ ವರದಿಗಳು ಅಂಗೀಕೃತಗೊಂಡಿವೆ? ಎಂಬ ಬಗ್ಗೆ ವಸ್ತುಸ್ಥಿತಿ ವರದಿಯನ್ನು ಜು.4ರಂದು ನ್ಯಾಯಾಲಯಕ್ಕೆ ಒದಗಿಸಬೇಕು ಎಂದು ಎಸಿಬಿಗೆ ತಾಕೀತು ಮಾಡಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top