ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೆ ಅವರು ಸಾವನ್ನಪ್ಪಿದ್ದಾರೆ. ಅವರ ಗೌರವಾರ್ಥ ಶನಿವಾರ ಒಂದು ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
Prime Minister Narendra Modi shared a picture from his "most recent meeting with my dear friend, Shinzo Abe in Tokyo. Always passionate about strengthening India-Japan ties, he had just taken over as the Chairman of the Japan-India Association." pic.twitter.com/vDYAhqaXmR
— ANI (@ANI) July 8, 2022
ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಒಪ್ಪಂದದ ಹಂತದಲ್ಲಿ ಭಾರತ ಮತ್ತು ಜಪಾನ್ ಬಾಂಧವ್ಯ ವೃದ್ಧಿಗೆ ಶಿಂಜೊ ಅಬೆ ಅವರ ಕೊಡುಗೆ ಅಪಾರ. ಇಂದು ಜಪಾನ್ ಜೊತೆ ಸಂಪೂರ್ಣ ಭಾರತ ಶೋಕಾಚರಣೆ ಮಾಡುತ್ತಿದೆ. ಕಠಿಣ ಸಂದರ್ಭಗಳಲ್ಲಿ ನಾವು ಜಪಾನ್‌ನ ಸಹೋದರ ಮತ್ತು ಸಹೋದರಿಯರ ಜೊತೆ ನಿಂತಿರುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಬೆ ಅವರೊಂದಿಗಿನ ನನ್ನ ಒಡನಾಟ ಹಲವು ವರ್ಷಗಳ ಹಿಂದಿನದು. ನಾನು ಗುಜರಾತ್ ಸಿಎಂ ಆಗಿದ್ದಾಗ ಅವರನ್ನು ಪರಿಚಯ ಮಾಡಿಕೊಂಡಿದ್ದೆ. ನಾನು ಪ್ರಧಾನಿಯಾದ ಬಳಿಕವೂ ನಮ್ಮ ಸ್ನೇಹ ಮುಂದುವರಿಯಿತು. ಆರ್ಥಿಕತೆ ಮತ್ತು ಜಾಗತಿಕ ವ್ಯವಹಾರಗಳ ಬಗ್ಗೆ ಅವರ ತೀಕ್ಷ್ಣವಾದ ಒಳನೋಟ ಯಾವಾಗಲೂ ನನ್ನ ಮೇಲೆ ಆಳವಾದ ಪ್ರಭಾವ ಬೀರಿತ್ತು ಎಂದು ಮೋದಿ ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
