ಉದ್ಯಾನನಗರಿ ಬೆಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಲಾಲ್ಬಾಗ್ ನಲ್ಲಿ ಫ್ಲವರ್ ಷೋ ಆಯೋಜಿಸಲಾಗಿದೆ. ಆದರೆ ಈ ಬಾರಿಯ ಫ್ಲವರ್ ಶೋ ಬಹಳ ವಿಶೇಷತೆಯಿಂದ ಕೂಡಿದ್ದು, ಇದಕ್ಕೆ ನಮ್ಮ ಹೆಮ್ಮೆಯ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇಡಲಾಗಿದೆ.
ಈ ಬಾರಿಯ ಫ್ಲವರ್ ಷೋ ಬೆಂಗಳೂರಿನ ಲಾಲ್ಬಾಗ್ ನಲ್ಲಿ ಆಗಸ್ಟ್ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದ್ದಾರೆ.
ವಿಧಾನಸೌಧ ದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮುನಿರತ್ನ “ಈ ಬಾರಿಯ ಫ್ಲವರ್ ಷೋ ಕೋವಿಡ್ ನಿಯಮಗಳನ್ನು ಪಾಲಿಸಿ ನಡೆಸಲಾಗಿದ್ದು, ಆಗಸ್ಟ್ 15 ರಂತರ ಇನ್ನು ಎರಡು ದಿನಗಳ ಕಾಲ ನಡೆಸಲು ನಡೆದಿದೆ. ಇದಲ್ಲದೆ ಈ ಬಾರಿಯ ಫ್ಲವರ್ ಷೋ ಗೆ ನಮ್ಮ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇಡಲಾಗಿದ್ದು, ಇದಕ್ಕಾಗಿ ವಿದೇಶದಿಂದ ಹೂವುಗಳನ್ನು ತರಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಗಾಜನೂರಿನ ಮನೆ ವಿಶೇಷವಾಗಿದೆ. ಕಳೆದ ಬಾರಿ ಕೋವಿಡ್ ಕಾರಣದಿಂದಾಗಿ ನಡೆಸಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಹಿಂದೆ ಮಾಡಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತೇವೆ ಎಂದು ತಿಳಿಸಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
