fbpx
ಸಮಾಚಾರ

ಕನ್ನಡದ ಹಿರಿಯ ನಟ ಶಿವರಂಜನ್ ಮೇಲೆ ಗುಂಡಿನ ದಾಳಿ

ಹಿರಿಯ ಚಿತ್ರನಟ ಶಿವರಂಜನ್ ಬೋಳಣ್ಣವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಪವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

ನಟ ಶಿವರಂಜನ್ ಅವರ ಮನೆ ಎದುರು ಈ ಗುಂಡಿನ ದಾಳಿ ನಡೆದಿದ್ದು ಸುತ್ತಮುತ್ತಲಿನ ಜನ ಬೆಚ್ಚಿ ಬಿದ್ದಿದ್ದಾರೆ. ಬೈಕ್ ಮೇಲೆ ಬಂದ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ. ಆದರೆ, ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಲ್ಲೇ ನಟ ಪಾರಾದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ರಾತ್ರಿ ಏಳರಿಂದ ಎಂಟು ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ತಿ ವಿಚಾರವಾಗಿ ಶಿವರಂಜನ್‌ ಅವರ ಮೇಲೆ ಶೂಟೌಟ್‌ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಅಂದಹಾಗೆ ಅಮೃತಸಿಂಧು, ರಾಜಾರಾಣಿ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿ ಶಿವರಂಜನ್ ನಾಯಕ ನಟರಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top