ಕೋವಿಡ್ ವಿರುದ್ಧ ಹೋರಾಡಲು ಮಾಸ್ಕ ಮತ್ತು ಸೋಶಿಯಲ್ ಡಿಸ್ಟೆನ್ಸ್ ತುಂಬಾ ಮುಖ್ಯವಾದದ್ದು. ಇದಲ್ಲದೆ ಪ್ರತಿಯೊಬ್ಬರೂ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವುದು ಅಗತ್ಯ. ಈಗಾಗಿ ಸರ್ಕಾರ ಪ್ರತಿಯೊಬ್ಬರಿಗೆ ಉಚಿತವಾಗಿ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಿದೆ.
ಭಾರತಕ್ಕೆ ಸ್ವಾತಂತ್ರ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಸಂಭ್ರಮಾಚರಣೆಯ ಭಾಗವಾಗಿ ಪ್ರತಿಯೊಬ್ಬರಿಗೂ 75 ದಿನಗಳ ಕಾಲ ಉಚಿತ ಬೂಸ್ಟರ್ ಲಸಿಕೆಯನ್ನು ನೀಡುವ ಅಭಿಯಾನ ಆರಂಭಿಸಲಾಗಿದೆ.
As part of #AzadiKaAmritMahotsav celebrations, free COVID-19 Precaution Dose drive for all adults for the next 75 days has commenced. I urge all eligibles to get their Precaution Dose.
PM @NarendraModi Ji's Govt is committed to creating a Healthy & Safe India.
— Dr Mansukh Mandaviya (@mansukhmandviya) July 15, 2022
ಜುಲೈ 15 ರಿಂದ ಸೆಪ್ಟೆಂಬರ್ 30 ವರೆಗೆ ಪ್ರತಿಯೊಬ್ಬ ನಾಗರಿಕರಿಗೆ ಉಚಿತ ಲಸಿಕೆ ನೀಡಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 18 ರಿಂದ 59 ವರ್ಷದವರಿಗೆ ಕೊರೊನಾ ಮೂರನೇ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಈ ಹಿಂದೆ ಕೇವಲ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗಿತ್ತು. ಆದರೆ ಇದೀಗ ಪ್ರತಿಯೊಬ್ಬ ನಾಗರಿಕನಿಗೂ ಬೂಸ್ಟರ್ ಡೋಸ್ ಲಸಿಕೆ ನೀಡುವುದಾಗಿ ತಿಳಿಸಲಾಗಿದೆ.
ಇಂದಿನಿಂದ ಕೇವಲ 75 ದಿನಗಳವರೆಗೆ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳು ಉಚಿತವಾಗಿ ಲಭ್ಯವಿರುತ್ತವೆ. “ಆಜಾದಿಯ ಅಮೃತ್ ಮಹೋತ್ಸವದ ಅಡಿಯಲ್ಲಿ, ಜುಲೈ 15 ರಿಂದ 75 ದಿನಗಳ ಉಚಿತ ಲಸಿಕೆ ಅಭಿಯಾನವನ್ನು ನಡೆಸಲಾಗುವುದು, ಇದರಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ಡೋಸ್ ನೀಡಲಾಗುತ್ತದೆ. ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
