ಇತ್ತೀಚೆಗೆ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜಗ್ಗೇಶ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ವೇಳೆ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕರ್ನಾಟಕದಿಂದ ಆಯ್ಕೆಯಾಗಿದ್ದ ಒಟ್ಟು ನಾಲ್ವರು ರಾಜ್ಯಸಭೆಯಲ್ಲಿ ಜುಲೈ 8ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಈ ಪೈಕಿ ಜಗ್ಗೇಶ್ ಸಹ ಅವತ್ತೇ ಪ್ರಮಾಣ ವಚನ ಸ್ವೀಕರಿಸಿದ್ದರು. ಮೂಲತಃ ರಾಘವೇಂದ್ರಸ್ವಾಮಿ ಗಳ ಪರಮ ಭಕ್ತರಗಿರುವ ಜಗ್ಗೇಶ್ ಅವರು ಶ್ರೀ ರಾಘವೇಂದ್ರ ಸ್ವಾಮಿ ಹೆಸರಿನಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದರು.
ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಜಗ್ಗೇಶ್ ಪ್ರಮಾಣವಚನ ತೆಗೆದುಕೊಂಡಿದ್ದು ಕ್ರಮಬದ್ಧವಾಗಿದೆಯಾ ಎಂಬುದನ್ನು ಪರಿಶೀಲಿಸುವಂತೆ ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಅವರು ಅಧಿಕಾರಿಗಳಿಗೆ ಸೂಚಿಸಿದ್ದರು. ‘ಪ್ರಮಾಣವಚನ ಸ್ವೀಕರಿಸಿದ್ದು ಕ್ರಮಬದ್ಧವಾಗಿರಲಿಲ್ಲ. ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಬೇಕು ಎಂಬುದಾಗಿ ಅಧಿಕಾರಿಗಳು ಹೇಳಿದ್ದರು’ ಎಂದು ಮಾಧ್ಯಮಗಳು ವರದಿಯಾಗಿವೆ.
ಹೀಗಾಗಿ, ಜಗ್ಗೇಶ್ ಅವರು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.. ಜಗ್ಗೇಶ್ ಈ ಭಾರಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಜಗ್ಗೇಶ್ ಅವರು ಎರಡನೇ ಬಾರಿ ಪ್ರಮಾಣವಚನ ತೆಗೆದುಕೊಳ್ಳುವ ಮುನ್ನ ಸಭಾಪತಿ ವೆಂಕಯ್ಯ ನಾಯ್ಡು ಜಗ್ಗೇಶ್ ಅವರ ಹೆಸರು ಹೇಳದೇ ಪ್ರಮಾಣ ವಚನ ಸ್ವೀಕಾರ ಮಾಡುವಾಗ ನಿಯಮಗಳನ್ನ ಮೀರಬಾರದು ಎಂದು ಹೇಳಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
