ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಮೇಲೆ ವಿಪರೀತ ಕುತೂಹಲ ಹುಟ್ಟುಕೊಂಡಿರೋದು ಎಲ್ಲರಿಗೂ ಗೊತ್ತಿರೋ ವಿಚಾರ, ಚಿತ್ರದ ಬಗ್ಗೆ ಸುದೀಪ್ ಅಭಿಮಾನಿಗಳು ಸೇರಿದಂತೆ ಸಿನಿರಸಿಕರೆಲ್ಲರಲ್ಲೂ ತಲೆಕೆಡಿಸಿಕೊಂಡು ಕೂತಿದ್ದಾರೆ. ಅದ್ಧೂರಿ ಮೇಕಿಂಗ್, ಪೋಸ್ಟರ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವಂತಹ ಸ್ಟಿಲ್ಲುಗಳ ಮೂಲಕವೇ ಭಾರಿ ಸಂಚಲನ ಸೃಷ್ಟಿಸಿರುವ ಈ ಚಿತ್ರ ಎಬ್ಬಿಸಿರೋ ಅಲೆ ಕಂಡು ಬಹುತೇಕರು ಅಚ್ಚರಿಗೊಂಡಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಕೋಡಿಯೊಡೆಯುತ್ತಿದೆ.
The theme of #VR
THE DEVIL'S FURY – Gumma Banda Gumma – https://t.co/6fApOCAQZ7#VRonJuly28 @KicchaSudeep @JackManjunath @AJANEESHB @SingerHarshikaD @deepakmuziblue @ramjowrites #palanibharathi #santhoshvarma @TSeries @LahariMusic #VikrantRona #VRin3D
— Anup Bhandari (@anupsbhandari) July 21, 2022
ಈಗಾಗಲೇ ಮೂರು ಹಾಡುಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈಗ ಮತ್ತೊಂದು ಹಾಡು ರಿಲೀಸ್ ಆಗಿದ್ದು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಬಹಳ ಕುತೂಹಲ ಮೂಡಿಸಿದ್ದ ಹಾಡು ‘ಗುಮ್ಮಾ ಬಂದ ಗುಮ್ಮಾ..’ ಈ ಹಾಡು ಇದೀಗ ಬಿಡುಗಡೆಯಾಗಿದೆ. ‘ರಾತ್ರಿ ಕುದುರೆ ಬೆನ್ನ ಹೇರಿ ಬೀಸೊ ಗಾಳಿ ಜೊತೆಗೆ ಸೇರಿ’ ಎಂಬ ಸಾಹಿತ್ಯದ ಮೂಲಕ ಶುರು ಆಗೊ ಈ ಹಾಡು ಆಲಿಸುವ ಪ್ರೇಕ್ಷಕನಿಗೆ ರೋಮಾಂಚನ ಗೊಳಿಸುವಂತಿದೆ.
ಹಾಡಿನಲ್ಲಿ ಬರುವ “ರಣದಲಿ ಮೊಳಗೋ ನಗಾರಿ…
ಹಿರಿಯುವ ಮೊನಚು ಕಠಾರಿ…
ಜನ ಗಣ ಬನ ಸಂಹಾರಿ…
ಕಾಳಾಹಿ ಕಾಳಾಹಿಯೋ..” ಎಂಬ ಸಾಲುಗಳು ಪ್ರೇಕ್ಷಕ ವಲಯದಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ.
ಅಂದಹಾಗೆ ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಜುಲೈ 28 ರಂದು ವಿಶ್ವಾದ್ಯಂತ 3D ಅವತರಣಿಕೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
