ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಆದರೆ, ಕಳೆದ ವಾರದ ಎಪಿಸೋಡ್‌ನಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಂದೋಲನಗಳೂ ಆದವು. ಕ್ಷಮೆ ಯಾಚಿಸಲು ಯಕ್ಷಗಾನ ಪ್ರಿಯರು ಪಟ್ಟು ಹಿಡಿದರು. ಇದಕ್ಕೆ ಜೀ ಕನ್ನಡ ವಾಹಿನಿ ಮಣಿದಿದೆ. ಕ್ಷಮೆ ಕೇಳಿ ಪೋಸ್ಟ್ ಹಾಕಿದೆ.
ಹೌದು! ಇದೇ 23 ಮತ್ತು 24 ಜುಲೈ ಪ್ರಸಾರವಾದ ಎಪಿಸೋಡ್‌ನಲ್ಲಿ ತಂಡವೊಂದು ಯಕ್ಷಗಾನ ಕುರಿತು ಹಾಸ್ಯಮಯವಾಗಿ ನೃತ್ಯ ಪ್ರದರ್ಶನ ಮಾಡಿದ್ದಾರೆ. ನೃತ್ಯ- ಹಾಸ್ಯ- ಯಕ್ಷಗಾನ, ಈ ಮೂರನ್ನು ಒಂದರಲ್ಲಿ ತೋರಿಸಿರುವು ತಪ್ಪು ಯಕ್ಷಗಾನಕ್ಕೆ ಬೆಲೆ ಕೊಡ ಬೇಕು ವಾಹಿನಿ ಮತ್ತು ತಂಡ ಕ್ಷಮೆ ಕೇಳಬೇಕು ಎಂದು ನೆಟ್ಟಿಗರು ಅಗ್ರಹಿಸಿದ್ದರು. ಈಗ ಇದಕ್ಕೆ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದೆ.
ಕ್ಷಮೆ ಕೇಳಿದ ಜೀ ಕನ್ನಡ:
‘ಜೀ ಕನ್ನಡ ವಾಹಿನಿಯು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಯ ಮೂಲಕ ಅನೇಕ ಕಲಾ ಪ್ರಕಾರಗಳನ್ನು ಗೌರವಿಸುತ್ತ, ನಾಡಿನ ಜನತೆಗೆ ಪರಿಚಯಿಸುತ್ತಲೇ ಬಂದಿದೆ. ನಮ್ಮ ವೇದಿಕೆಯಲ್ಲಿ ಯಕ್ಷಗಾನಕ್ಕೂ ಸಹ ಪ್ರಾಮುಖ್ಯತೆ ನೀಡಿದ್ದು, ನೃತ್ಯಾಭಿಮಾನಿಗಳ ಪ್ರಶಂಸೆ ಪಡೆದಿದ್ದೇವೆ. ಆದರೆ ಕಳೆದ ವಾರ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗಳಿಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲವೆಂದು ವಾಹಿನಿ ಸ್ಪಷ್ಟೀಕರಿಸಲು ಬಯಸುತ್ತದೆ ಮತ್ತು ಈ ಮೂಲಕ ಕ್ಷಮೆಯಾಚಿಸುತ್ತೇವೆ. ನಮ್ಮ ಅತ್ಯತ್ತಮ ಕೆಲಸಗಳಿಗೆ ನೀವು ಕೊಟ್ಟ ಗೌರವ ಹಾಗೂ ನಾವು ಎಡವಿದಾಗ ನೀವು ಕೊಡುವ ಸಲಹೆಯನ್ನು ಸಹ ನಾವು ಸ್ವಾಗತಿಸುತ್ತೇವೆ. ಇಲ್ಲಿವರೆಗೂ ನೀವು ಕೊಟ್ಟ ಪ್ರೋತ್ಸಾಹ, ಬೆಂಬಲ ಹಾಗೆಯೇ ಮುಂದುವರಿಯಲಿ ಎಂದು ಜೀ ಕನ್ನಡ ವಾಹಿನಿ ಆಶಿಸುತ್ತದೆ’ ಎಂದು ಪತ್ರದ ಮೂಲಕ ಕ್ಷಮೆ ಕೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
