fbpx
ಸಿನಿಮಾ

ಚಿತ್ರೀಕರಣದ ವೇಳೆ ಸ್ಯಾಂಡಲ್ವುಡ್ ನ ಖ್ಯಾತ ನಟಿಗೆ ಪೆಟ್ಟು! ಆಸ್ಪತ್ರೆಗೆ ದಾಖಲು

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಕನ್ನಡಿಗರ ಮನ ಗೆದ್ದ ನಟಿ ಎಂದರೆ ಅದು ಸಂಯುಕ್ತ ಹೆಗಡೆ. ಕಿರಿಕ್ ಪಾರ್ಟಿ ಸಿನಿಮಾದ ನಂತರ ಹಲವಾರು ಇತರೆ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ಈ ನಟಿ ಇದೀಗ ಚಿತ್ರೀಕರಣದ ಸಮಯದಲ್ಲಿ ಬಲವಾದ ಪೆಟ್ಟು ಮಾಡಿಕೊಂಡಿದ್ದು ಆಸ್ಪತ್ರೆಗೆ ಧಾಖಲಾಗಿದ್ದಾರೆ.

 

 

ಸದ್ಯ ನಟಿ `ಕ್ರೀಮ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಯಾಗಿದ್ದರು. ಈ ಸಿನಿಮಾದಲ್ಲಿ ಫೈಟಿಂಗ್ ಸೀನ್ ಒಂದರ ಚಿತ್ರೀಕರಣ ಮಾಡಬೇಕಿತ್ತು. ಆದರೆ ಇದಕ್ಕೆ ಡೂಪ್ ಬಳಸಿ ಚಿತ್ರೀಕರಣ ಮಾಡೋಣ ಎಂದು ಚಿತ್ರತಂಡ ಒತ್ತಾಯಿಸಿದರೂ ಸಂಯುಕ್ತ ಇದಕ್ಕೆ ಒಪ್ಪಲಿಲ್ಲ. ಕೊನೆಗೆ ಇವರ ಹಟದಂತೆ ಫೈಟಿಂಗ್ ಸೀನ್ ಚಿತ್ರೀಕರಿಸಲಾಗಿತ್ತು. ಆದರೆ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಇದೀಗ ಇವರ ಕಾಲು ಟ್ವಿಸ್ಟ್ ಆಗಿದೆ.

ಅಭಿಷೇಕ್ ಬಸಂತ್ ನಿರ್ದೇಶನದ ʻಕ್ರೀಮ್ʼ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ಡಿ ಕೆ. ದೇವೇಂದ್ರ, ಫೈಟ್ ಮಾಸ್ಟರ್ ಪ್ರಭು ಹಾಗೂ ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ರವರು ಡ್ಯೂಪ್ ಬಳಸಲು ಒತ್ತಾಯಿಸಿದರೂ ನಾಯಕಿ ಬಿಲ್ಕುಲ್ ಒಪ್ಪಲಿಲ್ಲ. ಇದರ ಪರಿಣಾಮ ನಾಯಕಿ ಸಂಯುಕ್ತಾ ಕಾಲು ಟ್ವಿಸ್ಟ್ ಆಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಈ ಸಿನಿಮಾದ ಚಿತ್ರೀಕರಣವನ್ನು ಮುಂದೂಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top