ತಮ್ಮ ಏಕಮುಖ ಆಲೋಚನೆಗಳ ಮೂಲಕ ಬೆಂಬಲಿಗರು ಮತ್ತು ವಿರೋಧಿಗಳನ್ನು ಸಮಾನ ಪ್ರಮಾಣದಲ್ಲಿ ಸಂಪಾದಿಸಿರುವಾತ ಚಕ್ರವರ್ತಿ ಸೂಲಿಬೆಲೆ. ಇತ್ತೀಚಿನ ವರ್ಷಗಳಲ್ಲಿ ಯಂಗ್ ಪುಂಗ್ಲಿ ಎಂತಲೇ ಸಾಮಾಜಿಕ ಜಾಲತಾಣದಲ್ಲಿ ಟ್ರೋಲಿಗೀಡಾಗಿರುವ ಸೂಲಿಬೆಲೆ ಈಗ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿ ಕೊನೆಗೂ ಕ್ಷಮೆ ಕೇಳಿದ್ದಾರೆ
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ತಿಂಗಳುಗಳೇ ಕಳೆದರು ಅವರ ನೆನಪು ಮಾತ್ರ ಸದಾ ಅಭಿಮಾನಿಗಳ ಮನಸಲ್ಲಿ ಅಚ್ಚೆಯಾಗಿ ಉಳಿದಿದೆ. ಆದರೆ ಇದೀಗ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಟ್ವೀಟ್ ಅಪ್ಪು ಅಭಿಮಾನಿಗಳನ್ನು ಕೆರಳಿಸಿದೆ. ಈ ಟ್ವೀಟ್ ವೈರಲ್ ಆಗುತ್ತಿದಂತೆ ಚಕ್ರವರ್ತಿ ಅಪ್ಪು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.
MLAs complain that CM not even signs file may be lack of time😂
But he has all the time to watch Premier movies and shed tears. During the death of Movie Actor, he gave his three days to get involved.
If not this outrage he would have watched VIkrantRona for sure 14/n— Chakravarty Sulibele (@astitvam) August 1, 2022
ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಟೀಕಿಸುವ ಬರದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ್ದಾರೆ. ಚಕ್ರವರ್ತಿ ಮಾಡಿರುವ ಟ್ವೀಟ್ ಏನೆಂದರೆ ” ತಮ್ಮದೇ ಪಕ್ಷದ ಶಾಸಕರ ಫೈಲ್ಸ್ ಗೆ ಸಹಿ ಮಾಡಲು ಮುಖ್ಯಮಂತ್ರಿಯವರಿಗೆ ಸಮಯದ ಅಭಾವಿದೆ ಎಂದು ಪಕ್ಷದವರೇ ಟೀಕಿಸಿದ್ದಾರೆ. ಆದರೆ, ಮುಖ್ಯಮಂತ್ರಿಯವರಿಗೆ ಪ್ರಿಮಿಯರ್ ಶೋ ಅಟೆಂಡ್ ಮಾಡಿ, ಸಿನಿಮಾ ನೋಡಿ ಕಣ್ಣೀರು ಹಾಕಲು ಸಮಯವಿದೆ. ನಟನೊಬ್ಬನು ನಿಧನರಾದಾಗ ಮೂರು ದಿನಗಳ ಕಾಲ ಸಮಯ ಕೊಟ್ಟಿದ್ದಾರೆ. ಮುಂದೆ ವಿಕ್ರಾಂತ್ ರೋಣ ಸಿನಿಮಾವನ್ನೂ ಅವರು ನೋಡಲಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. ಅಪ್ಪು ನಿಧನರಾದಾಗ ಮುಖ್ಯಮಂತ್ರಿಯವರು ಮೂರೂ ದಿನಗಳ ಕಾಲ ಅಪ್ಪು ಬಳಿ ಇದ್ದ ವಿಷಯವನ್ನು ಚಕ್ರವರ್ತಿ ಸೂಲಿಬೆಲೆ ವ್ಯಂಗ್ಯವಾಗಿ ಟೀಕಿಸಿದ್ದಾರೆ. ಇದೆ ಕಾರಣಕ್ಕಾಗಿ ಅಪ್ಪು ಅಭಿಮಾನಿಗಳು ಚಕ್ರವರ್ತಿ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು.🙏 pic.twitter.com/JRd3Bt4g8o
— Chakravarty Sulibele (@astitvam) August 1, 2022
ಯಾವಾಗ ಈ ವಿಷಯ ವೈರಲ್ ಆಗಲು ಶುರುವಾಯಿತೋ ಎಚ್ಚೆತ್ತುಕೊಂಡ ಚಕ್ರವರ್ತಿ ವಿಡಿಯೋ ಮೂಲಕ ಅಪ್ಪು ಅಭಿಮಾನಿಗಳಿಗೆ ಕ್ಷಮೆ ಕೇಳಿದರು. “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಅಪ್ಪು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
