fbpx
ಸಮಾಚಾರ

ಸಾಂಸಾರಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಶಶಿ ಕುಮಾರ್

ಮಾರ್ಡನ್ ರೈತ ಎಂದು ಪ್ರಸಿದ್ದಿ ಪಡೆದಿದ್ದ ಈ ಶಶಿ ಕುಮಾರ್ ರೈತ ಎಂಬ ಮಾನದಂಡದ ಮೇಲೆಯೇ ಬಿಗ್​ಬಾಸ್​ಗೆ ರಿಯಾಲಿಟಿ ಶೋಗೆ ಆಯ್ಕೆಯಾಗಿದ್ದರು. ಆದರೆ ಬಿಗ್ ಬಾಸ್ ನಂತರ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಒಂದು ಸಿನಿಮಾ ಮಾಡುತ್ತಿದ್ದ ಬಗ್ಗೆ ಸಹ ವಿಚಾರ ಕೇಳಿ ಬಂದಿತ್ತು. ಆದರೆ ನಂತರ ಆ ಬಗ್ಗೆ ಸಹ ಮಾಹಿತಿ ಇಲ್ಲ. ಆದರೆ ಸದ್ಯಕ್ಕೆ ಅವರ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಅದು ಅವರ ಮದುವೆಯ ಸುದ್ದಿ.

ಹೌದು, ಬಿಗ್ ಬಾಸ್ ಖ್ಯಾತಿಯ ಶಶಿ ಅವರು ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ವಾತಿ ಎಂಬುವರನ್ನ ಶಶಿ ಕುಮಾರ್ ಮದುವೆಯಾಗಿದ್ದಾರೆ. ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್‌ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ ಜರುಗಿದೆ. ಆಗಸ್ಟ್ 7 ರಂದು ಬೆಳಗ್ಗೆ 9 ರಿಂದ 10:15 ವರೆಗೆ ಇದ್ದ ಶುಭ ಮುಹೂರ್ತದಲ್ಲಿ ಸ್ವಾತಿ ಅವರ ಕೊರಳಿಗೆ ಶಶಿ ಕುಮಾರ್ ಮಾಂಗಲ್ಯಧಾರಣೆ ಮಾಡಿದರು.

ಅಂದಹಾಗೆ ಮಾರ್ಡನ್ ರೈತ ಶಶಿ ಕುಮಾರ್ ಅವರು ಚಿಕ್ಕಬಳ್ಳಾಪುರದ ಚಿಂತಾಮಣಿ ಮೂಲದವರು. ಬೆಂಗಳೂರಿನ ಜಿಕೆವಿಕೆ ಕೃಷಿ ವಿದ್ಯಾಲಯದಲ್ಲಿ ಶಶಿ ಕುಮಾರ್ ಪದವಿ ಪಡೆದಿದ್ದಾರೆ. ಕೃಷಿಯಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸುವುದರಲ್ಲಿ ಶಶಿ ಕುಮಾರ್ ಸದಾ ಮುಂದು. .ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಶಶಿ ಕುಮಾರ್ ಆರೋಗ್ಯದ ಬಗ್ಗೆ ಸುಲಭ ಕೃಷಿ ಮತ್ತು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕೃಷಿ ಮಾಡುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top