fbpx
ಸಮಾಚಾರ

‘ಕಾಡು ಕುದುರೆ ಓಡಿ ಬಂದಿತ್ತ’ ‘ಕೋಡಗನ ಕೋಳಿ ನುಂಗಿತ್ತಾ’ ಖ್ಯಾತಿಯ ಕನ್ನಡದ ಹೆಸರಾಂತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

‘ಕಾಡು ಕುದುರೆ ಓಡಿ ಬಂದಿತ್ತಾ..’ ಹಾಡಿನ ಮೂಲಕ ಖ್ಯಾತಿಯಾಗಿದ್ದ, ಹೆಸರಾಂತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಗುರುವಾರ ನಿಧನರಾಗಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ., ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇತ್ತೀಚಿಗೆ ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಕಾಡು ಕುದುರೆ ಓಡಿ ಬಂದಿತ್ತ’ ‘ಕೋಡಗನ ಕೋಳಿ ನುಂಗಿತ್ತಾ’, ‘ಅಳಬೇಡಾ ತಂಗಿ ಅಳಬೇಡ’ ‘ಬಿದ್ದೀಯಬ್ಬೇ ಮುದುಕಿ’ ಮೊದಲಾದ ಗೀತೆಗಳ ಮೂಲಕ ಶಿವಮೊಗ್ಗ ಸುಬ್ಬಣ್ಣ ಜಯಪ್ರಿಯತೆಗಳಿಸಿದ್ದರು.

ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top