ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ರಾಜ್ಯದಲ್ಲಿ ಮಂಗಳವಾರ 1,465 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 1,295 ಮಂದಿ ಡಿಸ್ಚಾರ್ಜ್ ಆಗಿದ್ದು, ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
ಇಂದಿನ 23/08/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/cwmUlOYENG @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/TUpJapLT4c
— K'taka Health Dept (@DHFWKA) August 23, 2022
ಬೆಂಗಳೂರಿನಲ್ಲಿ ಇಂದು 987 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,59,935ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಈವರೆಗೆ ರಾಜ್ಯದಲ್ಲಿ 40,43,564 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,92,637 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 34,488 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,564 ಸ್ಯಾಂಪಲ್ (ಆರ್‌ಟಿ ಪಿಸಿಆರ್ 16,164 + 8,400 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
