ಏಷ್ಯಾಕಪ್ 2022 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡ 19.5 ಓವರ್‌ನಲ್ಲಿ 148 ರನ್ ಗಳಿಸಿ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿತು. ಆದರೆ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಆಟಗಾರರು ತಂತಮ್ಮ ತೋಳುಗಳಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಕಣಕ್ಕಿಳಿದಿದ್ದರು. ಇದು ಸಾಮಾನ್ಯವಾಗಿ ಎಲ್ಲರ ಗಮನ ಸೆಳೆದಿತ್ತು.
#Breaking: Pakistan cricket team will wear black arm bands in their first match of #AsiaCup vs India today to express their solidarity & support for the flood affectees across the Pakistan.#IndvPak
— Sawera Pasha (@sawerapasha) August 28, 2022
ಅಷ್ಟಕ್ಕೂ ಪಾಕ್ ಆಟಗಾರರಾಉ ತ್ತೊಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಕಾರಣವೂ ಇದೆ,. ಪಾಕಿಸ್ತಾನದಲ್ಲಿ ಪ್ರವಾಹದಿಂದ ಸಂತ್ರಸ್ತರಾದ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಪಾಕ್ ಆಟಗಾರರು ತೋಳಿಗೆ ಬ್ಲ್ಯಾಕ್ ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದರು. ಪ್ರವಾಹದಲ್ಲಿ ಮರಣವನ್ನಪ್ಪಿದವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಪಾಕ್ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದರು.
ಇನ್ನು ಕಪ್ಪು ಪಟ್ಟಿ ಧರಿಸಿ ಆಡುವ ಕುರಿತು ಅಧಿಕೃತ ಹೇಳಿಕೆಯನ್ನೂ ಪಾಕ್ ಕ್ರಿಕೆಟ್ ಮಂಡಳಿ ನೀಡಿದೆ. ‘ಪಾಕಿಸ್ತಾನದಲ್ಲಿ ಎದುರಾಗಿರುವ ಭೀಕರ ಪ್ರವಾಹದ ಹಿನ್ನೆಲೆ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಿ, ಪ್ರವಾಹ ಪೀಡಿತರಿಗೆ ಒಗ್ಗಟ್ಟು ಮತ್ತು ಬೆಂಬಲವನ್ನು ವ್ಯಕ್ತಪಡಿಸಲು ಭಾರತದ ವಿರುದ್ಧದ ಪಂದ್ಯದಲ್ಲಿ ಬ್ಲ್ಯಾಕ್ ಬ್ಯಾಂಡ್ ಧರಿಸಿ ಆಡುತ್ತಿದ್ದೇವೆ.” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಂದಹಾಗೆ ಪಾಕ್ ನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಕಳೆದ ಜೂನ್‌ನಿಂದ ಇಲ್ಲಿಯ ವರೆಗೆ ಮಾನ್ಸೂನ್ ಪ್ರವಾಹದಲ್ಲಿ 1,033 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
