ಭಾರಿ ಮಳೆಗೆ ಬೆಂಗಳೂರು ಜನರು ತತ್ತರಿಸಿದ್ದಾರೆ. . ಎಲ್ಲಿ ನೋಡಿದರೂ ಮಳೆ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನಿಂತ ನೀರನ್ನು ಕಂಡು ತಮ್ಮ ಜನನಾಯಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಬೇಕಾಗಿದ್ದ ಸಂಸದ ತೇಜಸ್ವಿ ಸೂರ್ಯ ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ತೇಜಸ್ವಿ ಸೂರ್ಯಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.
ಸೋಮವಾರ ಇಡೀ ದಕ್ಷಿಣ ಬೆಂಗಳೂರು ಮಳೆ ನೀರಿನಲ್ಲಿ ಮುಳುಗುತ್ತಿದ್ದರೆ ಈ ಚೈಲ್ಡ್ ಚಪಾತಿ @Tejasvi_Surya ಅದ್ಯಾವುದೋ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ತಿನ್ನೋಕೆ ಕರೆಯುತ್ತಿದ್ದಾನೆ. pic.twitter.com/mEOvVydVdJ
— ಪ್ರದೀಪ್ ಶೆಟ್ಟಿ (@pradeepshettyn) September 6, 2022
ತೇಜಸ್ವಿ ಸೂರ್ಯ ಹೇಳಿದ್ದೇನು ?:
ಇನ್‌ಸ್ಟಾಗ್ರಾಂನಲ್ಲಿ ದೋಸೆ ಫೋಟೊ ನೋಡಿ ನಗರದ ಹೋಟೆಲ್‌ಗೆ ಭೇಟಿ ನೀಡಿದ್ದಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಪದ್ಮನಾಭನಗರದಲ್ಲಿನ ಸ್ವಾತಿ ಕಿಚನ್ಗೆ ಬಂದಿದ್ದೇನೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ನೋಡಿದ್ದೆ. ಹಾಗಾಗಿ ಬಂದು ಬೆಣ್ಣೆ ಮಸಾಲೆ ದೋಸೆ ತಿನ್ನುತ್ತಿದ್ದೇನೆ. ಇಲ್ಲಿ ಉಪ್ಪಿಟ್ಟು ಕೂಡ ಚೆನ್ನಾಗಿರುತ್ತೆ. ಬಂದು ನೀವೂ ತಿನ್ನಿ ಎಂದು ತೇಜಸ್ವಿ ಸೂರ್ಯ ಹೇಳಿರುವುದು ವಿಡಿಯೋದಲ್ಲಿದೆ.
ಈ ವಿಡಿಯೋ ನೋಡಿ ಬೆಂಗಳೂರಿನ ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವ ಸಂಸದನಿಗೆ ಹಿಗ್ಗಾ – ಮುಗ್ಗಾ ಜಾಡಿಸುತ್ತಿದ್ದಾರೆ. ಇಂಥಾ ಹುಡುಗಾಟಗಳನ್ನೆಲ್ಲಾ ಬಿಟ್ಟು ಪ್ರವಾಹ ಪರಿಸ್ಥಿತಿಯಲ್ಲಿ ಸಂಸದರು ಜವಾಬ್ದಾರಿಯಿಂದ ಜನರ ನೆರವಿಗೆ ಬರಬೇಕು ಎಂದು ಆಗ್ರಹಿಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
