fbpx
ಸಮಾಚಾರ

ಯುದ್ಧನಗರಿ ಉಕ್ರೇನ್ ನಿಂದ ಶಿಕ್ಷಣ ಮುಂದುವರಿಸುವ ಕನಸು ಕಂಡು ಭಾರತಕ್ಕೆ ಆಗಮಿಸಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಭಾರತ ಸರ್ಕಾರ!

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಭೀಕರ ಯುದ್ಧದಲ್ಲಿ ಸಾವಿನ ದವಡೆಯಿಂದ ಪಾರಾಗಿ ತಾಯ್ನಾಡಿಗೆ ವಾಪಸ್ಸಾದ ಭಾರತೀಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಇದರಿಂದ ಸಾವಿರಾರು ಮೆಡಿಕಲ್ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಗರಗಳ ನಡುವೆ ಯುದ್ಧ ನಡೆಯುತ್ತಿದ್ದ ಸಂಧರ್ಬಹದಲ್ಲಿ ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಬಹಳಹಷ್ಟು ಶ್ರಮಿಸಿತು. ಅದರಲ್ಲೂ ಉಕ್ರೇನ್ ನಗರದಲ್ಲಿದ್ದ ಭಾರತೀಯ ಮೆಡಿಕಲ್ ವಿದ್ಯಾರ್ಥಿಗಳನ್ನು ಕರೆತರುವ ಸಂಧರ್ಭದಲ್ಲಿ ಭಾರತದಲ್ಲೇ ಓದು ಮುಂದುವರೆಸಲು ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ. ಇದರಿಂದ ವೈದ್ಯರಾಗಬೆಂದು ಕನಸು ಕಂಡಿದ್ದ ಮೆಡಿಕಲ್ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು.

ಉಕ್ರೇನ್​ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ಭಾರತದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಮೆಡಿಕಲ್ ಮುಂದುವರೆಸಲು ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ. ವಿದೇಶದಲ್ಲಿ ಅಭ್ಯಾಸ ಮಾಡಿ ಬಂದ ವಿದ್ಯಾರ್ಥಿಗಳಿಗೆ ಅರ್ಧದಲ್ಲಿ ಪ್ರವೇಶ ಕಲ್ಪಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ. ಈ ರೀತಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಮಧ್ಯದಲ್ಲಿ ಅವಕಾಶ ಕೊಟ್ಟರೆ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗುತ್ತದೆ. ಮೆರಿಟ್‌ ಇಲ್ಲದ ವಿದ್ಯಾರ್ಥಿಗಳಿಗೆ ಅವಕಾಶ ಕೊಡುವುದರಿಂದ ಕಾನೂನು ಹೋರಾಟಗಳಿಗೂ ಕಾರಣವಾಗುವ ಅಪಾಯವಿದೆ ಎಂದು ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸರಕಾರ ಉಲ್ಲೇಖಿಸಿದೆ.

ಹೀಗಾಗಿ ಅಪಾರವಾದ ಕನಸನ್ನು ಒಟ್ಟು ತಾಯ್ನಾಡಿಗೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದೀಗ ದಿಕ್ಕೇ ತೋಚದೆ ಕಂಗಾಲಾಗಿದ್ದಾರೆ. ಇತ್ತೀಚಿಗೆ ಕೆಲವು ದಿನಗಳಿಂದ ಉಕ್ರೇಕ್ ವಿವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಆರಂಭಿಸಿದೆ. ಕೆಲ ವಿದ್ಯಾರ್ಥಿಗಳು ಸ್ವದೇಶದಲ್ಲೇ ಕೂತು ಆನ್ಲೈನ್ ಪಾಠ ಕೇಳುತ್ತಿದ್ದಾರೆ. ಇದೀಗಾ ಆಫ್ಲೈನ್ ಕ್ಲಾಸ್​ಗೆ ಬನ್ನಿ ಎಂಬ ಆಹ್ವಾನ ಕೂಡ ಉಗ್ರೇನ್​ನಿಂದ ಬಂದಿದೆ. ಆದ್ರೆ ಭಾರತದಿಂದ ಉಕ್ರೇನ್​ಗೆ ನೇರ ಫ್ಲೈಟ್ ರದ್ದು ಮಾಡಿರುವ ಕಾರಣ ವಿದ್ಯಾರ್ಥಿಗಳಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top