fbpx
ಸಮಾಚಾರ

ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮವನ್ನು ಅಪ್ಪಿಕೊಂಡ ದಲಿತ ಕುಟುಂಬ! ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಫೋಟೋ

ದೇವರ ಉತ್ಸವದಲ್ಲಿ 14 ವರ್ಷದ ದಲಿತ ಬಾಲಕನೊಬ್ಬ ಉತ್ಸವ ಮೂರ್ತಿಯನ್ನು ಮುಟ್ಟಿದ ಎಂದು ಆತನನ್ನು ಥಳಿಸಿ, ಕುಟುಂಬಕ್ಕೆ .60 ಸಾವಿರ ದಂಡ ವಿಧಿಸಿರುವ ಘಟನೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್‌ ಸಮೀಪದ ಉಳ್ಳೇರಹಳ್ಳಿ ಗ್ರಾಮದಲ್ಲಿ ನದೀದ ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆ ವ್ಯಕ್ತವಾಗಿತ್ತು.

 

 

ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿ ದೇವರ ಫೋಟೋ ಇದ್ದ ಜಾಗದಲ್ಲಿ ಅಂಬೇಡ್ಕರ್ ಫೋಟೋವನ್ನು ಇಟ್ಟಿದ್ದಾರೆ. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಏನಿದು ಘಟನೆ:
ದಲಿತ ಸಮುದಾಯದ ಬಾಲಕ ದೇವರ ಉತ್ಸವದ ಗುಜ್ಜು ಕೋಲನ್ನು ಮುಟ್ಟಿದ ಕಾರಣಕ್ಕೆ ಅಲ್ಲಿನ ಸವರ್ಣೀಯರು 60 ಸಾವಿರ ರೂ. ದಂಡ ಕಟ್ಟಬೇಕು ತಪ್ಪಿದರೆ ಗ್ರಾಮ ತೊರೆಯಬೇಕು ಎಂದು ಬೆದರಿಕೆ ಹಾಕಿದ್ದ ಆರೋಪದಡಿ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top