fbpx
ಸಮಾಚಾರ

ದೇವರ ಕೋಲು ಮುಟ್ಟಿದ ದಲಿತ ಯುವಕನ ಮೇಲೆ ಹಲ್ಲೆ ಮಾಡಿ ದಂಡ ಹಾಕಿದ್ದ ಕಿಡಿಗೇಡಿಗಳು ಅರೆಸ್ಟ್: ರೌಡಿ ಶೀಟ್ ದಾಖಲು

ದೇವರ ಉತ್ಸವದಲ್ಲಿ 14 ವರ್ಷದ ದಲಿತ ಬಾಲಕನೊಬ್ಬ ಉತ್ಸವ ಮೂರ್ತಿಯನ್ನು ಮುಟ್ಟಿದ ಎಂದು ಆತನನ್ನು ಥಳಿಸಿ, ಕುಟುಂಬಕ್ಕೆ .60 ಸಾವಿರ ದಂಡ ವಿಧಿಸಿರುವ ಘಟನೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್‌ ಸಮೀಪದ ಉಳ್ಳೇರಹಳ್ಳಿ ಗ್ರಾಮದಲ್ಲಿ ನದೀದ ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆ ವ್ಯಕ್ತವಾಗಿತ್ತು.

ಈ ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸ್ ಇಲಾಖೆ ಕ್ರಮ ಜರುಗಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿದೆ. ಯುವಕನಿಗೆ ಹಲ್ಲೆ ಮಾಡಿದವರನ್ನು ಅರೆಸ್ಟ್ ಮಾಡಿದ್ದು ಆರೋಪಿಗಳ ವಿರುದ್ಧ ರೌಡಿ ಶೀಟ್ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಎಡಿಜಿಪಿ ಅಲೋಕ್ ಕುಮಾರ್ ಅವರೇ ಮಾಹಿತಿ ನೀಡಿದ್ದಾರೆ.

 

 

ಘಟನೆ ಕುರಿತು ರಾಜ್ಯಸಭಾ ಸಂಸದ ಜಿಸಿ ಚಂದ್ರಶೇಖರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು. ಚಂದ್ರಶೇಖರ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು “ಇದು ನಿಜಕ್ಕೂ ಆಘಾತಕಾರಿ ಮತ್ತು ನಾಚಿಕೆಗೇಡಿನ ಘಟನೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಅಂತಹ ಅಂಶಗಳು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಈ ಪ್ರಕರಣದಲ್ಲೂ ರೌಡಿ ಶೀಟ್ ತೆರೆಯಲು ಪ್ರಕ್ರಿಯೆ ಆರಂಭಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಏನಿದು ಘಟನೆ:
ದಲಿತ ಸಮುದಾಯದ ಬಾಲಕ ದೇವರ ಉತ್ಸವದ ಗುಜ್ಜು ಕೋಲನ್ನು ಮುಟ್ಟಿದ ಕಾರಣಕ್ಕೆ ಅಲ್ಲಿನ ಸವರ್ಣೀಯರು 60 ಸಾವಿರ ರೂ. ದಂಡ ಕಟ್ಟಬೇಕು ತಪ್ಪಿದರೆ ಗ್ರಾಮ ತೊರೆಯಬೇಕು ಎಂದು ಬೆದರಿಕೆ ಹಾಕಿದ್ದ ಆರೋಪದಡಿ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top