ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿದ್ದ ಲಂಚದ ದೂರಿನ ಪ್ರಕರಣಕ್ಕೆ ಸಂಭಂದಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ತನಿಖೆಗೆ ತಡೆ ನೀಡುವಂತೆ ಅವರು ಸಲ್ಲಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ‘ತನಿಖೆಗೆ ಮಧ್ಯಂತರ ತಡೆ’ ನೀಡಿದೆ.
ಮೊನ್ನೆಯಷ್ಟೇ ಕೋರ್ಟ್ನಲ್ಲಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅವರ ಕೆಲವು ಕುಟುಂಬಸ್ಥರ ವಿರುದ್ಧ ಪ್ರಕರಣದ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಕೆಳ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತದಲ್ಲಿ ಎಫ್ಎಆರ್ ಕೂಡಾ ದಾಖಲಾಗಿತ್ತು. ಈ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠವು, ದೂರುದಾರರಾದ ಟಿ.ಜೆ. ಅಬ್ರಾಹಂ ಅವರಿಗೆ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೊಹಟಗಿ ಹಾಗೂ ಸಿದ್ಧಾರ್ಥ ದವೆ ಅವರು, ಜನಪ್ರತಿನಿಧಿಗಳ ಮುನ್ನ ಎಫ್ಐಆರ್ ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವನ್ನು ಹೈಕೋರ್ಟ್ ನಿರ್ಲಕ್ಷ್ಯಿಸಿದೆ ಎಂದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
