ಇತ್ತೀಚಿಗೆ ರಾಜ್ಯದಂತ ಹೆಚ್ಚು ಚರ್ಚೆಯಾಗುತ್ತಿರುವ ವಿಷಯವೆಂದರೆ ಅದು payCM. ಈ ಸಂಬಂಧ ಪೊಲೀಸರು ಹಲವಾರು ಆರೋಪಿಗಳನ್ನು ಭಂದಿಸಿ ವಿಚಾರಣೆ ಕೂಡ ನಡೆಸುತ್ತಿದ್ದಾರೆ. ಇವೆಲ್ಲದರ ಮದ್ಯೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದೆ. ಇದಕ್ಕಾಗಿ ಯಾವುದೇ ಅನುಮತಿಯಿಲ್ಲದೆ ರಸ್ತೆಗಿಳಿದು ಸಾರ್ವಜನಿಕ ಸ್ಥಳದಲ್ಲಿರುವ ಗೋಡೆಗಳ ಮೇಲೆ payCM ಪೋಸ್ಟರ್ ಹಂಟಿಸುತ್ತಿದ್ದಾರೆ. ಇದರ ವಿರುದ್ಧ ಸರ್ಕಾರ ಕ್ರಮ ಕೈಗೊಂಡ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಯಾವುದೇ ಅನುಮತಿ ಪಡೆಯದೆ ಏಕಾಏಕಿ ರಸ್ತೆಗೆ ಇಳಿದು ಪೋಸ್ಟರ್ ಅಂಟಿಸಿದ್ದರು. ಹೀಗಾಗಿ ಪೊಲೀಸರು ಇವರ ವಿರುದ್ಧ ಎನ್ಸಿಆರ್ ದಾಖಲಿಸಿದ್ದಾರೆ.
ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಿ ನಡೆಸಿದ ಸಭೆಯಲ್ಲಿ ಪೋಸ್ಟರ್ ಅಭಿಯಾನದ ಬಗ್ಗೆ ಚರ್ಚೆ ನಡೆದಿದೆ. ಸಭೆ ಮುಗಿದ ಬಳಿಕ ಯಾವುದೇ ಅನುಮತಿಯಿಲ್ಲದೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಕೈ ನಾಯಕರು ರಸ್ತೆಗಿಳಿದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಗೋಡೆಗಳಿಗೆ payCM ಪೋಸ್ಟರ್ ಹಂಟಿಸಿದ್ದಾರೆ. ಇದರ ಪರಿಣಾಮವಾಗಿ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿತ್ತು. ಇವೆಲ್ಲ ಕಾರಣಗಳಿಂದ ಪೊಲೀಸರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಎನ್ಸಿಆರ್ ದಾಖಲಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
