fbpx
ಸಮಾಚಾರ

ನಾಡಗೀತೆ ಹಾಡಲು ಧಾಟಿ ಹಾಗೂ ಕಾಲಮಿತಿ ನಿಗದಿಪಡಿಸಿದ ಸರ್ಕಾರ! ‘ಜೈ ಭಾರತ ಜನನಿಯ ತನುಜಾತೆ’ 18 ವರ್ಷದ ಸಮಸ್ಯೆಗೆ ತೆರೆ

ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ದಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ಇದ್ದ ಗೊಂದಲಕ್ಕೆ ರಾಜ್ಯ ಸರಕಾರ ಇದೀಗ ಪೂರ್ಣ ವಿರಾಮ ಹಾಡಿದೆ. ಇದರಿಂದ 18 ವರ್ಷಗಳ ಗೊಂದಲಕ್ಕೆ ರಾಜ್ಯ ಸರಕಾರ ಈಗ ಪೂರ್ಣ ವಿರಾಮ ಹಾಕಿದೆ.

ಗಾಯಕ, ರಾಗ ಸಂಯೋಜಕ ಮೈಸೂರು ಅನಂತಸ್ವಾಮಿ ಅವರು ಸಂಯೋಜಿಸಿದ್ದ ಧಾಟಿಯಲ್ಲಿ ಕುವೆಂಪು ಅವರ ಕವನದ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ರಾಜ್ಯ ಸರಕಾರ ಸಮ್ಮತಿ ನೀಡಿದೆ. ಅದಕ್ಕಾಗಿ 2.30 ನಿಮಿಷಗಳ ಕಾಲಮಿತಿಯನ್ನೂ ನಿಗದಿಪಡಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ಕುಮಾರ್‌ ಅವರು, ‘ಕುವೆಂಪು ವಿರಚಿತ ನಾಡಗೀತೆ ಜಯಭಾರತ ಜನನಿಯ ತನುಜಾತೆಗೆ ಧಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ. ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ ಇನ್ನು 2.30 ನಿಮಿಷಗಳಲ್ಲಿ ನಾಡಗೀತೆಯನ್ನು ಹಾಡಬಹುದು. ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಇನ್ನು ಅಧಿಕೃತವಾಗಿ ಹಾಡಬಹುದು’ ಎಂದು ತಿಳಿಸಿದ್ದಾರೆ.

ಅಂದಹಾಗೆ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು ‌. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದು ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು.

ನಾಡಗೀತೆಯನ್ನು ಯಾವ ಧಾಟಿಯಲ್ಲಿ ಹಾಡಬೇಕು ಎನ್ನುವ ಕುರಿತು ಇದುವರೆಗೂ ಕ್ರಮವಾಗಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ, ವಸಂತ ಕನಕಾಪುರ, ಡಾ. ಚೆನ್ನವೀರ ಕಣವಿ ಮತ್ತು ಡಾ.ಎಚ್.ಆರ್.ಲಿಲಾವತಿ ಅವರ ನೇತ್ರತ್ವದಲ್ಲಿ ನಾಲ್ಕು ಸಮಿತಿಗಳನ್ನು ಕಾಲಕಾಲಕ್ಕೆ ನೇಮಿಸಿ ವರದಿ ಪಡೆಯಲಾಗಿತ್ತು. ಆದರೆ ಧಾಟಿ ಅಂತಿಮ ಗೊಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪರಿಷತ್ತು ಒತ್ತಡ ಹೇರಿತ್ತು ಎಂದರು. ಅಂತಿಮವಾಗಿ ಮೈಸೂರು ಅನಂತಸ್ವಾಮಿಯವರು ನೀಡಿದ ರಾಗ ಸಂಯೋಜನೆಯನ್ನು ಸರ್ಕಾರ ಅಂತಿಮಗೊಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top