ನವರಾತ್ರಿ ಹಬ್ಬದ ಎರಡನೇ ದಿನದಂದು ದುರ್ಗಾ ದೇವಿಯ ಎರಡನೇ ಅವತರವಾದ ಬ್ರಹ್ಮಚಾರಿಣಿ ರೂಪವನ್ನು ಪೂಜಿಸಲಾಗುವುದು. ದುರ್ಗಾದೇವಿಯ ಎರಡನೇ ಅವತಾರವಾದ ಬ್ರಹ್ಮಚಾರಿಣಿಯೆಂದರೆ ಇನ್ನೂ ಮದುವೆಯಾಗದಿರುವ ಯುವತಿ ಎಂದರ್ಥ ಸೌಮ್ಯಳೂ, ಶಾಂತ ಸ್ವಭಾವವನ್ನು ಧರಿಸಿರುವ ಬ್ರಹ್ಮಚಾರಿಣಿಯು ಮನಸ್ಸನ್ನು ಪ್ರಶಾಂತಗೊಳಿಸಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾಳೆ ಎನ್ನುವ ನಂಬಿಕೆಯಿದೆ.
ಪಾರ್ವತಿಯಾಗಿ, ಹಿಮಾಲಯನ ಪುತ್ರಿಯಾಗಿ ಜನಿಸಿದ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಬಹಳ ಕಠಿಣವಾದ ತಪಸ್ಸು ಮಾಡಿದ ಕಾರಣದಿಂದ ದೇವಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು.
ನವದುರ್ಗೆಯರಲ್ಲಿ ಬ್ರಹ್ಮಚಾರಿಯದ್ದು ಎರಡನೆಯ ರೂಪ . ಈಕೆ ಸೃಷ್ಟಿಕರ್ತನಾದ ಬ್ರಹ್ಮನಿಗೆ ಜ್ಞಾನ ಕೊಟ್ಟವಳು, ಬ್ರಹ್ಮಚಾರಿಣಿಯದ್ದು ಸಾತ್ವಿಕ ಸುಂದರ ರೂಪ, ಬ್ರಹ್ಮಚಾರಿಣಿಯ ರೂಪ ಅತ್ಯಂತ ವಿಶಿಷ್ಟವಾದದ್ದು. ಇವಳು ಪೂರ್ಣ ಜ್ಯೋತಿರ್ಮಯ ಸ್ವರೂಪ, ಕೈಯಲ್ಲಿ ಜಪಮಾಲೆ, ಎಡಗೈಯಲ್ಲಿ ಕಮಂಡಲವನ್ನು ಹಿಡಿದಿದ್ದಾಳೆ , ಈಕೆ ಸದಾ ಧ್ಯಾನದಲ್ಲಿ ತಲ್ಲೀನಳಾಗಿರುತ್ತಾಳೆ. ಶಿವನನ್ನು ಪಡೆಯುವುದಕ್ಕೆ ಬ್ರಹ್ಮಚಾರಿ ನಾರದರ ಉಪದೇಶದಂತೆ ಅಖಂಡ ತಪಸ್ಸು ಮಾಡುತ್ತಾಳೆ. ತಪಸ್ಸನ್ನು ಮಾಡಿದ ಸಲುವಾಗಿ ಸದಾ ಧ್ಯಾನದಲ್ಲಿ ತಲ್ಲೀನಳಾಗಿರುತ್ತಾಳೆ.
ನವರಾತ್ರಿಯ ಎರಡನೇ ದಿನ ಈ ತಾಯಿಯನ್ನು ಪೂಜಿಸಿದರೆ ವಿಶೇಷ ವರಗಳು ಸಿಗುತ್ತವೆ. ಸದಾ ಧ್ಯಾನಮಗ್ನಳಾದ ಬ್ರಹ್ಮಚಾರಿಣಿಗೆ ಭಕ್ತರ ಮೇಲೆ ಅಪಾರ ಕಾಳಜಿ , ನಿತ್ಯ ಕಲ್ಮಶವಿಲ್ಲದ ಮನಸ್ಸಿನಿಂದ ನವರಾತ್ರಿಯಲ್ಲಿ ಇವಳನ್ನು ಪೂಜಿಸಿದರೆ ಬೇಡಿದ ವರಗಳನ್ನು ಕರುಣಿಸುತ್ತಾಳೆ.ಬ್ರಹ್ಮಚಾರಿಣಿಯ ಆರಾಧನೆಯಿಂದ ಪೂಜೆಯ ಫಲಗಳು ಅನಂತವಾದವು. ಬ್ರಹ್ಮಚಾರಿಣಿ ತನ್ನನ್ನು ಪೂಜಿಸುವ ಭಕ್ತರಿಗೆ ಅನಂತ ಫಲಗಳನ್ನು ನೀಡುತ್ತಾಳೆ.
ಇವಳ ಉಪಾಸನೆಯಿಂದ ಆಧ್ಯಾತ್ಮ ಸಾಧನೆ ಮಾಡಬಹುದು. ಇವಳ ಆರಾಧನೆಯಿಂದ ತ್ಯಾಗ ಮನೋಭಾವ, ವೈರಾಗ್ಯ, ಸದಾಚಾರ ಮತ್ತು ಸಂಯಮ ವೃದ್ಧಿಯಾಗುತ್ತದೆ. ಮನಸ್ಸು ಏಕಾಗ್ರತೆಯನ್ನು ಸಾಧಿಸುತ್ತದೆ.ಮನಸ್ಸು ಏಕಾಗ್ರತೆಯಲ್ಲಿ ಇರುತ್ತದೆ. ಇವಳ ಅನುಗ್ರಹವಿದ್ದರೆ ಸಕಲ ಕಾರ್ಯದಲ್ಲಿ ಜಯ ಸಾಧಿಸಬಹುದು. ನವರಾತ್ರಿಯ ಎರಡನೇ ದಿನ ಯೋಗಿಗಳು ಬ್ರಹ್ಮಚಾರಿಣಿಯ ಉಪಾಸನೆಯನ್ನು ಮಾಡುತ್ತಾರೆ ಎಂದು ಸಾಧಕನ ಮನಸ್ಸು ಸ್ವಾಧಿಷ್ಠಾನ ಚಕ್ರದಲ್ಲಿ ಸ್ಥಿತವಾಗಿರುತ್ತದೆ. ಈ ಚಕ್ರದಲ್ಲಿ ನೆಲೆನಿಂತ ಮನಸ್ಸುಳ್ಳ ಯೋಗಿಯೂ ಬ್ರಹ್ಮಚಾರಿಣಿಯ ಆಶೀರ್ವಾದಕ್ಕೆ ಪಾತ್ರನಾಗುತ್ತಾನೆ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
