ಸ್ಯಾಂಡಲ್ ವುಡ್ ಸ್ಟಾರ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಯಶೋಮಾರ್ಗದ ಮೂಲಕ ಸುಮಾರು 4 ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ್ದ ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಇದೀಗ ಮಾಡುಂಬಿ ಹರಿಯುತ್ತಿದ್ದು ಕೊಡಿ ಹೊಡೆದಿದೆ.
ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು ಕೆರೆಯ ತುಂಬಾ ನೀರು ಬಂದಿದ್ದು ನೋಡಲು ಸುಂದರಮಯವಾಗಿದ್ದು ಸುತ್ತಮುತ್ತಲಿನ ಜನರಲ್ಲಿ ನೀರಿನ ದಾಹ ತೀರಿ ಮಂದಹಾಸ ಮೂಡಿಸಿದೆ..!!#YashoMarga pic.twitter.com/hOxHNt6tLW
— YashoMarga (@YashoMarga) September 15, 2022
2016ರಲ್ಲಿ ಯಶೋಮಾರ್ಗ ಫೌಂಡೇಶನ್ ನಿಂದ ಅಭಿವೃದ್ದಿಸಿದ್ದ ಕೆರೆ ಅಭಿವೃದ್ದಿ ಪಡಿಸಿದ ನಂತರ ಇದೇ ಮೊದಲು ಕೋಡಿ ಬಿದ್ದಿದೆ.ಈ ಹಿಂದೆ 2008 ರಲ್ಲಿ ತಲ್ಲೂರು ಕೆರೆ ಕೋಡಿ ಬಿದ್ದು ನೀರು ಹರಿದಿತ್ತು. ಈಗ ಮತ್ತೆ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.
96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಸತತ ವರ್ಷಗಳ ಬರದಿಂದ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಸಂಪೂರ್ಣವಾಗಿ ಹೂಳು ತುಂಬಿಕೊಂಡಿತ್ತು.2017 ಫೆಬ್ರವರಿ ತಿಂಗಳಲ್ಲಿ ಕೆರೆಯ ಹೂಳು ತಗೆಯುವ ಕೆಲಸಕ್ಕೆ ಯಶ್ ದಂಪತಿ ಚಾಲನೆ ನೀಡಿದ್ದರು. ಈ ತಲ್ಲೂರು ಕೆರೆಯನ್ನು ನಟ ಯಶ್ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ್ದರು. ಹೀಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಯಶ್ ಕೆರೆಯಂತಲೇ ಪ್ರಸಿದ್ಧಿ ಪಡೆದಿದೆ. ಇದರಿಂದ ಸುಮಾರು 10 ಕ್ಕೂ ಹೆಚ್ಚು ಗ್ರಾಮದ ರೈತರಿಗೆ ಅನುಕೂಲವಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
