fbpx
ಸಮಾಚಾರ

ಉಗ್ರರ ಜೊತೆ ಕಾದಾಡಿ ಗುಂಡೇಟು ತಿಂದು ಆಸ್ಪತ್ರೆಗೆ ಸೇರಿದ ಸೇನಾ ಶ್ವಾನ ” ಜೂಮ್ ” ವಿಧಿವಶ!

ಕಾಶ್ಮೀರದ ಅನಂತನಾಗ್‌ನಲ್ಲಿ ಇತ್ತೀಚಿಗೆ ಭಯೋತ್ಪಾದಕರು ಮತ್ತು ಭಾರತೀಯ ಸೇನೆಯ ನಡುವೆ ಒಂದು ಕಾಳಗ ನಡೆದಿತು. ಈ ಕಾಳಗದಲ್ಲಿ ” ಜೂಮ್ ” ಎಂಬ ಸೇನಾ ಶ್ವಾನ ಭಯೋತ್ಪಾದಕರನ್ನು ಹಿಡಿಯಲು ಮಹತ್ವದ ಪಾತ್ರ ವಹಿಸಿತು. ಆದರೆ ಈವೇಳೆ ಶ್ವಾನಕ್ಕೆ ಭಯೋತ್ಪಾದಕರ ತಂಡದಿಂದ ಗುಂಡೇಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇದೀಗ ಈ ಶ್ವಾನ ಮೃತಪಟ್ಟಿದೆ.

ಇತ್ತೀಚಿಗೆ ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಭಯೋತ್ಪಾದಕರ ಮೇಲಿನ ಎನ್‌ಕೌಂಟರ್‌ನಲ್ಲಿ ಉಗ್ರರನ್ನು ಸದೆಬಡಿಯಲು ಸೇನಾ ಶ್ವಾನ ಹೊರಡುತ್ತಿತ್ತು. ಈ ವೇಳೆ ಎರಡು ಗುಂಡು ತಗುಲಿ ಗಂಭೀರ ಗಾಯಗೊಂಡಿತ್ತು. ತಕ್ಷಣ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

 

 

ತೀವ್ರವಾಗಿ ಗಾಯಗೊಂಡಿದ್ದ ಶ್ವಾನವನ್ನು 54 ಅಡ್ವಾನ್ಸ್ ಫೀಲ್ಡ್ ವೆಟರ್ನರಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಗುರುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಜೂಮ್‌ ಕೊನೆಯುಸಿರೆಳೆದಿದೆ. 11.45ರ ವೇಳೆಗೆ ಶ್ವಾನ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ಮಾಡುತ್ತಿತ್ತು. ಆದರೆ, ಇದ್ದಕ್ಕಿದ್ದಂತೆ ಉಸಿರುಗಟ್ಟಿದಂತಾಗಿ ಸಾವು ಕಂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅಚ್ಚರಿಯ ಸಂಗತಿ ಎಂದರೆ ತನಗೆ ಎರಡು ಗುಂಡೇಟು ಬಿದ್ದರು ಸಹ ಜೂಮ್‌ ಶ್ವಾನ ಉಗ್ರರ ಮೇಲೆ ದಾಳಿ ಮುಂದುವರೆಸಿ ಭಯೋತ್ಪಾದಕರನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಗಿತ್ತು. ನಂತರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top