ಕ್ರಿಕೆಟ್ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ಬಹಳ ಇಷ್ಟಪಟ್ಟು ನೋಡುವ ಒಂದು ಕ್ರೀಡೆಯಲ್ಲಿ ಕ್ರಿಕೆಟ್ ಕೂಡ ಒಂದು. ಐಸಿಸಿ ಟಿ20 ವಿಶ್ವಕಪ್ ಶುರುವಾಗಿದ್ದು, ಪ್ರತಿಯೊಬ್ಬರೂ ಸಹ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯುವ ಹೈ ವೋಲ್ಟೇಜ್ ಪಂದ್ಯಕ್ಕೆ ಕಾಯುತ್ತಿದ್ದರು. ಆದರೆ ಈ ಪಂದ್ಯ ನಡೆಯುವುದು ಅನುಮನ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಅಭಿಮಾನಿಗಳಿಗೆ ಒಂದು ಶುಭ ಸುದ್ದಿ ಸಿಕ್ಕಿದೆ.
ಭಾರತ ಮತ್ತು ಪಾಕಿಸ್ತಾನ ತಂಡ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ಸೆಣೆಸಾಡಲಿದೆ. ಈ ಪಂದ್ಯವನ್ನು ನೋಡಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಆದರೆ ಇತ್ತೀಚಿಗೆ ಮೆಲ್ಬೋರ್ನ್ ನಲ್ಲಿ ಮಳೆಯ ಆರ್ಭಟ ಬಹಳ ಜೋರಾಗಿತ್ತು. ಇದರಿಂದ ಕೆಲವೊಂದು ಅಭ್ಯಾಸ ಪಂದ್ಯಗಳು ಸಹ ನಡೆದಿರಲಿಲ್ಲ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡೆಯುವ ಪಂದ್ಯ ಕೂಡ ನಡೆಯುವುದಿಲ್ಲ ಎಂಬ ಸುದ್ದಿ ಇತ್ತು. ಆದರೆ ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈ ಮಹಾ ಕದನ ನಡೆಯುವ ಎಲ್ಲ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Stunning scene at Melbourne ground. pic.twitter.com/M7m3pVTSMR
— Vimal कुमार (@Vimalwa) October 22, 2022
ಮೆಲ್ಬೋರ್ನ್ನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಯಂ ಹೊರಗಡೆ ಅಭಿಮಾನಿಗಳು ಸಂಭ್ರಮಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಹೀಗಾಗಿ ಇಡೀ ವಿಶ್ವವೇ ಬಹಳ ಕಾತುರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯುವ ಹೈ ವೋಲ್ಟೇಜ್ ಪಂದ್ಯ ನಡೆಯುವ ಎಲ್ಲಾ ಸಾಧ್ಯತೆಗಳಿವೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
