ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆದ್ದಿದೆ. ವಿರಾಟ್ ಕೊಹ್ಲಿಯ ಬ್ಯಾಟಿಂಗ್ನಿಂದ ಭರ್ಜರಿ ಜಯ ಸಾಧಿಸಿದೆ. ಕೇವಲ 53 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 6 ಮನಮೋಹಕ ಬೌಂಡರಿಗಳೊಂದಿಗೆ ವಿರಾಟ್ ಕೊಹ್ಲಿ ಅಜೇಯ 82 ರನ್ ಸಿಡಿಸಿದರು.
ಪಾಕಿಸ್ತಾನದ ವಿರುದ್ಧ ಅಸಾಧಾರಣ ಪ್ರದರ್ಶನ ನೀಡಿದ್ದರ ಹೊರತಾಗಿಯೂ ವಿರಾಟ್ ಕೊಹ್ಲಿ, ಟಿ20 ಕ್ರಿಕೆಟ್ಗೆ ವಿದಾಯ ಹೇಳುವುದು ಉತ್ತಮ ಎಂದು ಪಾಕ್ ಲೆಜೆಂಡರಿ ವೇಗಿ ಶೋಯೆಬ್ ಅಖ್ತರ್ ಹೇಳಿದ್ದಾರೆ. ಅದಕ್ಕೆ ಅಕ್ತರ್ ನೀಡಿರುವ ಕಾರಣ ವಿಚಿತ್ರವಾಗಿದೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಶೋಯಬ್ ಅಖ್ತರ್, “ನನ್ನ ಪ್ರಕಾರ ವಿರಾಟ್ ಕೊಹ್ಲಿಯ ವೃತ್ತಿ ಜೀವನದ ಅತ್ಯಂತ ಶ್ರೇಷ್ಠ ಇನಿಂಗ್ಸ್ ಇದಾಗಿದೆ. ನಾನು ಆಡೇ ಆಡುತ್ತೇನೆ ಎಂಬ ಆತ್ಮ ವಿಶ್ವಾಸ ವಿರಾಟ್ ಕೊಹ್ಲಿಗೆ ಇತ್ತು. ಈ ಕಾರಣದಿಂದ ಅವರು ಈ ರೀತಿ ಬ್ಯಾಟಿಂಗ್ ಪ್ರದರ್ಶನ ತೋರಿದ್ದಾರೆ,” ಎಂದರು.
“ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಿಂದ ನಿವೃತ್ತಿಯಾಗಬೇಕು ಎಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಏಕೆಂದರೆ ಅವರು ಟಿ20 ಕ್ರಿಕೆಟ್‌ನಲ್ಲಿ ತಮ್ಮ ಸಂಪೂರ್ಣ ಶಕ್ತಿಯನ್ನು ಹಾಕಲು ನಾನು ಬಯಸುವುದಿಲ್ಲ. ಅವರು ಟಿ20 ಕ್ರಿಕೆಟ್ ಬದಲು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಬೇಕು,” ಎಂದು ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
