fbpx
ಸಮಾಚಾರ

“ಆ ಘಟನೆ ನಡೆದು 3 ದಿನಕ್ಕೆ ಪುನೀತ್ ಹೋಗಿಬಿಟ್ಟ, ಹೃದಯ ಚೂರಾಯ್ತು” ನಟ ಜಗ್ಗೇಶ್

ಚಂದನವನದ ರಾಜರತ್ನ, ಪುನೀತ್ ರಾಜಕುಮಾರ್ ಹಠಾತ್ ಕಣ್ಮರೆಯಾಗಿ, ಗತಿಸಿಹೋಗಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಇದೇ ದಿನ ತೀವ್ರ ಹೃದಯಾಘಾತದಿಂದ ಪುನೀತ್ ನಿಧನ ಹೊಂದಿದಾಗ ಇಡೀ ಕರುನಾಡು ನಲುಗಿಹೋಗಿತ್ತು. ನೋವು, ಕಣ್ಣೀರು, ಆಕ್ರಂದನದ ಮಧ್ಯೆ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತಿದೆ.

 

 

ಈ ಮಧ್ಯೆ ನವರಸನಾಯಕ ಜಗ್ಗೇಶ್ ಅವರು ಪುನೀತ್ ರಾಜಕುಮಾರ್ ಅವರ ಬಗೆಗಿನ ಕೊಂಚ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವಿಚಾರವಾಗಿ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜಗ್ಗೇಶ್ ಅವರ ಪೋಸ್ಟ್ ಅನ್ನು ಅವರ ಮಾತುಗಳಲ್ಲಿಯೇ ಓದಿ.

ಜಗ್ಗೇಶ್ ಅವರ ಫೇಸ್ಬುಕ್ ಪೋಸ್ಟ್ ಈ ರೀತಿ ಇದೆ:
ರಾಘಣನ ಮದುವೆಗೆ ವಜ್ರೇಶ್ವರಿ ಮ್ಯಾನೇಜರ್ ಕಂಠೀರವ ಕುಮಾರ್ ಬರಬೇಕು ಎಂದು ತಿಳಿಸಿದ..ಅಣ್ಣನ ಮನೆಯ ಮದುವೆ ಸಡಗರದಲ್ಲಿ ಬಾಗಿಯಾಗುವ ಸೌಭಾಗ್ಯ ಪರಿಮಳನಿಗೆ ತಯಾರಾಗಲು ಹೇಳಿದೆ..ಆಗ ನನ್ನ ಬಳಿ ಇದ್ದದ್ದು ಬುಲೇಟ್ ಅದನ್ನ ಏರಿ ಪುನೀತಫಾರ್ಮ್ ಗೆ ಹೋದೆವು..ಅಣ್ಣನ ಪ್ರೀತಿಗೆ ಏನು ಹೇಳಬೇಕೋ ಬಾಯ್ಯ ಬಾ ಎಂದು ಕೂಗಿ ಮೈಸವರಿ ಅವರೆ ಕುಡಿಯಲು ಪಾನಿಯ ನೀಡಿದರು..ಬಂದವರಿಗೆಲ್ಲಾ ನನ್ನ ಪರಿಚಯಿಸಿದರು ಅದರಲ್ಲಿ ನನ್ನ ವಿಶೇಷ ಪುನೀತ್..ಕಂದ ಇದು ಯಾರು ಗೊತ್ತ ನಮ್ಮ ರಜನಿಕಾಂತ ಎಂದರು ಬಾಲಕ ಪುನೀತ ಆಶ್ಚರ್ಯದಿಂದ ನನ್ನ ನೋಡಿದ
ನನಗು ಆತನ ನೋಡಿ ಆನಂದವಾಯಿತು..ಕೆಲದಿನದ ನಂತರ ರಣರಂಗ ಶಿವಣ್ಣನ ಚಿತ್ರದ ಕ್ಲೈಮ್ಯಾಕ್ಸ್ ಸಮಯದಲ್ಲಿ ವೆಂಕಟೇಶ ಎಂಬ ಜೂನಿಯರ್ ಆರ್ಟಿಸ್ಟ್ ಲೋ ತಗಳೋ ರಾಜಣ್ಣನ ಜೊತೆ ಫೋಟೊ ಎಂದು ನೀಡಿದ..ಆನಂದ ತಡೆಯಲಾಗಲಿಲ್ಲಾ ಕಾರಣ ಆ ಕಾಲದಲ್ಲಿ ರಾಜಣ್ಣನ ಜೊತೆ ಫೋಟೊ ಅಸಾಧ್ಯ ನೋಡಿದರೆ ಅದು ನನ್ನ ಹುಡುಕಿಬಂತು..ವೆಂಕಟೇಶ ಹೊಟ್ಟೆಪಾಡಿಗೆ ಸಣ್ಣ ಕ್ಯಾಮೆರ ಇಟ್ಟುಕೊಂಡಿದ್ದ ಒಂದು ಫೋಟೊಗೆ 5ರೂ ಪಡೆಯುತ್ತಿದ್ದ..ಬಡವ ಎಂದು ಅಣ್ಣನೆ ಸಹಕರಿಸಿದ್ದರು..

ಕೆಲ ವರ್ಷ ನಂತರ ಪುನೀತ ಅಣ್ಣನ ಜೊತೆ ಕಲಾವಿದ ಸಂಘದ ಕಾರ್ಯಕ್ರಮದಲ್ಲಿ ನರ್ತಿಸಿದ ಆಗ ಅಮ್ಮ ಜಗ್ಗೇಶ ಅವನು ಪ್ರೀತಿಸುವ ಹುಡುಗಿ ಬಂದಿದ್ದಾಳೆ ಎಂದರು ಜನರಮದ್ಯೆ ನನ್ನ ಕಣ್ಣಿಗೆ ಅಶ್ವಿನಿ ಕಾಣಲಿಲ್ಲಾ..ನಂತರ ಮದುವೆ ಸೂಪರ್ ಸ್ಟಾರ್ ಎಲ್ಲಾ ಆದರು ಅದೇನೊ ನನ್ನ ವಿಪರೀತ ಇಷ್ಟಪಡುತ್ತಿದ್ದ..ನಮ್ಮ ಸ್ನೇಹ ವರ್ಣಿಸಲಾಗದ ಸಂಕೋಲೆ..ಕಡೆದಿನಗಳ ಎಂದು ಭಾವಿಸಲಿಲ್ಲಾ ನಿರ್ದೇಶಕ ಸಂತೋಷ ಪುನೀತನ ಜೊತೆ ಮಂತ್ರಾಲಯಕ್ಕೆ ಕಳೆದುಕೊಂಡು ಹೋದ
ಆ ದಿನ ಮನಬಿಚ್ಚಿ ಮಾತಾಡಿ ನಕ್ಕು ಸಮಯ ಕಳೆದೆವು..ಕಡೆ3ದಿನದ ಹಿಂದೆ
ಯೋಗಿ ಪುನೀತ ಮಲ್ಲೇಶ್ವರಕ್ಕೆ ಬಂದ ವಿಷಯ ತಿಳಿಸಿದ ಕರೆಮಾಡಿದೆ ಅಣ್ಣ ಮಲ್ಲೇಶ್ವರದಲ್ಲಿ ಇರುವೆ ಎಂದ..ಹಾಗೆ ಎದ್ದು ಕಾರ್ ಡ್ರೈವ್ ಮಾಡಿ ನಾನೆ ಹೋದೆ.. ಪೂಜೆಗೆ ಕುಳಿತು ತೊಡೆ ನೋವಾಗಿದೆ ಹಾಗಾಗಿ ಚಿಕಿತ್ಸೆಗೆ ಬಂದೆ ಎಂದ..ಚಿಕಿತ್ಸೆ ಮುಗಿದ ಮೇಲೆ ಪುನೀತ್ ಸ್ನೇಹಿತ ಸತೀಶ್ ನಾನು ಪುನೀತ ಕೆಲ ಸಮಯ ಮಾತಾಡಿ ನಿರ್ಗಮಿಸಿದೆವು..

ಇದಾದ 3ದಿನಕ್ಕೆ ಪುನೀತ ಹೋಗಿಬಿಟ್ಟ ಅಂದರು ಹೃದಯ ಒಡೆದು ಚೂರಾಯಿತು..ಜೀವನದ ಆಸಕ್ತಿ.. ಬದುಕಿನ ಮೇಲೆ ನಂಬಿಕೆ..ನಾವು ಯಾರು..ಈ ಭೂಮಿಗೆ ಏಕೆ ಬಂದೆವು.. ಎಲ್ಲಾ ಇದೆ ಮುಂದೆ ಇರದು..ಯಾವುದು ಸತ್ಯ ಯಾವುದು ಮಿತ್ಯ..ನಾನು ಹೇಗೆ ಇರಬೇಕು ಏನು ಮಾಡಬೇಕು..ಬದುಕು ನಶ್ವರ..ಎಂಬ ಅನೇಕ ಪ್ರಶ್ನೆ ನನ್ನ ಕಾಡುತ್ತಿದೆ..ನನ್ನೊಳಗೆ ನಾನು ಬಚ್ಚಿಕೊಂಡು ಸುಮ್ಮನೆ ಇರುವಂತೆ ನಟಿಸಿ ನಾಟಕೀಯ ಬದುಕುತ್ತಿರುವೆ..ನನ್ನವರು ಎಂದು ಸಿಕ್ಕಾಗ ಮನಬಿಚ್ಚಿ ಮಾತಾಡುವೆ..ಕೆಲಸ ಇದ್ದಾಗ ಹೋಗುವೆ..ಮಿಕ್ಕಂತೆ ಯಾರಿಗು ಸಿಗದೆ ಏಕಾಂತಕ್ಕೆ ಜಾರುವೆ..ಇದು ಪುನೀತ ಸಿಕ್ಕಾಗ ಇದ್ದಾಗ ಹೋದಮೇಲೆ
ನನ್ನ ಹೃದಯದ ಅನಿಸಿಕೆ..
ಕಡೆಯ ಮಾತು ಪುನೀತ ಅವರ ತಂದೆಯ ಮೀರಿ ಬೆಳೆದು ಉಳಿದ ದೇವಮಾನವ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top