ಡಾಲಿ ಧನಂಜಯ್ ಅಭಿನಯದ ಹೊಯ್ಸಳ ಸಿನಿಮಾದ ಶೋಟಿಂಗ್ ಭರದಿಂದ ಸಾಗುತ್ತಿದೆ. ಇದೀಗ ಈ ಸಿನಿಮಾ ತಂಡ ಬೆಳಗಾವಿ ಸುತ್ತಾ ಮುತ್ತಾ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ಪೊಲೀಸರಿಗೆ ಫಜೀತಿ ತಂದಿಡುವಂತಹ ಕೆಲಸ ನಡೆದಿದೆ. ಈ ಕುರಿತು ಸ್ವತಃ ಪೊಲೀಸ್ ಇಲಾಖೆಯ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
This video is viral and as per the police this is a movie shoot. @COPBELAGAVI pic.twitter.com/lcs0WI6BQG
— All About Belgaum (@allaboutbelgaum) November 18, 2022
ಸಿಓಪಿ ಬೆಳಗಾವಿ ಹೆಸರಿನ ಟ್ವಿಟರ್ ಖಾತೆಯಲ್ಲಿ ‘ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಹೊಯ್ಸಳ ಸಿನಿಮಾ ಚಿತ್ರೀಕರಣದ ವಿಡಿಯೋ ಕ್ಲಿಪ್ (ಪೊಲೀಸ್ ಅಧಿಕಾರಿ ಒಬ್ಬ ವ್ಯಕ್ತಿಯನ್ನು ಕೆಳಗೆ ತಳ್ಳಿ ಬೂಟುಗಾಲಿನಿಂದ ಒದೆಯುತ್ತಿರುವ ದೃಶ್ಯ) ವೈರಲ್ ಮಾಡಿ, ನೈಜ ಘಟನೆ ಎಂಬಂತೆ ಬಿಂಬಿಸಿ ಪೊಲೀಸ್ ಇಲಾಖೆಯ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿದ್ದು, ಕಾರಣ ಈ ಬಗ್ಗೆ ತಪ್ಪಾಗಿ ಅರ್ಥೈಸಿಕೊಳ್ಳದಂತೆ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಸಾಮಾಜಿಕ ಜಾಳತಾಣದಲ್ಲಿ ಪೋಸ್ಟ್, ಕಾಮೆಂಟ್ಸ್ ಮಾಡದಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಲಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕರ ಗಮನಕ್ಕೆ…. pic.twitter.com/CV9Ad8xQuc
— COP BELAGAVI (@COPBELAGAVI) November 20, 2022
ಹೊಯ್ಸಳ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಚೆನ್ನಮ್ಮನ ವೃತದ ಬಳಿ ಪೊಲೀಸ್ ಅಧಿಕಾರಿಯ ಪಾತ್ರಧಾರಿ, ಮತ್ತೋರ್ವ ಪಾತ್ರಧಾರಿಯನ್ನು ತಳ್ಳಿ ಬೂಟುಗಾಲಿನಿಂದ ಒದೆಯುವ ದೃಶ್ಯವನ್ನು ಸೆರೆ ಹಿಡಿಯಲಾಗಿದೆ. ಆದರೆ ಇದು ಸಿನಿಮಾದ ಚಿತ್ರೀಕರಣ. ಆದರೆ ಈ ದೃಶ್ಯವನ್ನು ಕೆಲವು ಕಿಡಿಗೇಡಿಗಳು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟಿದ್ದಾರೆ.
ಈ ವಿಡಿಯೋ ನೋಡಿದ ಜನಸಾಮಾನ್ಯರು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿ ಪೋಲೀಸರ ಕುರಿತು ನೆಗೆಟಿವ್ ಕಮೆಂಟ್ ಗಳನ್ನು ಮಾಡುತ್ತಿದ್ದರು. ಇದನ್ನು ಗಮನಿಸಿದ ಬೆಳಗಾವಿ ಪೊಲೀಸ್ ತಂಡ ಇದೀಗ ಇದರ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
