ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಎಂದು ಪ್ರಖ್ಯಾತರಾಗಿರುವ ವಾಣಿ ಜಯರಾಂ (78) ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಿಂದಿ, ಉರ್ದು, ಮರಾಠಿ, ಬೆಂಗಾಲಿ, ಭೋಜ್‌ಪುರಿ, ತುಳು ಮತ್ತು ಒರಿಯಾ ಭಾಷೆಗಳು ಸೇರಿ ಸುಮಾರು ಹತ್ತು ಸಾವಿರ ಹಾಡುಗಳನ್ನು ಹಾಡಿದ್ದಾರೆ. ಇವರ ಗಾಯನಕ್ಕಾಗಿ ಇವರಿಗೆ ಮೂರು ಬಾರಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇತ್ತಿಚೇಗೆಗಷ್ಟೇ ಇವರಿಗೆ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದ್ದರು.
ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ಇವರು ಹಾಡಿದ್ದಾರೆ. ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ ಹೀಗೆ ಹಲವಾರು ಸಿನಿಮಾಗಳಲ್ಲಿ ಹಾಡಿದ್ದಾರೆ. ಹೆಸರಾಂತ ನಟರಾದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಹೀಗೆ ಹೆಸರಾಂತ ನಾಯಕರ ಸಿನಿಮಾಗಾಗಿ ಇವರು ಧ್ವನಿಯಾಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
