ಪ್ರಧಾನಿ ಮೋದಿ ಬುಧವಾರ ನೀಲಿ ಬಣ್ಣದ ಜಾಕೆಟ್‌ನಲ್ಲಿ ಸಂಸತ್ತಿನಲ್ಲಿ ಕಾಣಿಸಿಕೊಂಡರು. ಈ ಅಪರೂಪದ ಜಾಕೆಟ್ ಇದರ ಹಿಂದೆ ಒಂದು ಕಾರಣವಿದೆ. ಬಜೆಟ್ ಸಭೆಗಳ ಅಂಗವಾಗಿ ಸಂಸತ್ತಿಗೆ ಬಂದಿದ್ದ ಪ್ರಧಾನಿ ಮೋದಿ ವಿಶೇಷ ಜಾಕೆಟ್‌ನೊಂದಿಗೆ ಕಾಣಿಸಿಕೊಂಡರು. ಜಾಕೆಟ್ ಅನ್ನು ಮರುಬಳಕೆ ಮಾಡುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ವಸ್ತುಗಳಿಂದ ತಯಾರಿಸಲಾಗುತ್ತದೆ..
ಸೋಮವಾರ ಕರ್ನಾಟಕಕ್ಕೆ ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆಗಾಗಿ ಬಂದಿದ್ದ ಪ್ರಧಾನಿ ಮೋದಿಗೆ ದೇಶದ ಅತೀದೊಡ್ಡ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಇದನ್ನು ಉಡುಗೊರೆಯಾಗಿ ನೀಡಿತ್ತು. ಇದನ್ನು ಧರಿಸಿ ಇಂದು ಸಂಸತ್ ಸಭೆಗಳಲ್ಲಿ ಮೋದಿ ಭಾಗವಹಿಸಿದ್ದರು. ಈ ಜಾಕೆಟ್‌ನಲ್ಲಿ ಸಂದೇಶವೂ ಇದೆ.
ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಶ್ರೀ @narendramodi ಯವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಲೋಕಾರ್ಪಣೆಗೈದ ಇಂಡಿಯನ್ ಆಯಿಲ್ ಕಂಪನಿ#IndiaEnergyWeek #IndiaDrivesE20 pic.twitter.com/zwxoJDWnGa
— Pralhad Joshi (@JoshiPralhad) February 6, 2023
ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಭಾರತ ಇಂಧನ ಸಪ್ತಾಹ-2023’ಕ್ಕೆ ಫೆಬ್ರುವರಿ 06ರಂದು ಪ್ರಧಾನಿ ಮೋದಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಯಾರಿಸಿರುವ ಸೌರಶಕ್ತಿ ಆಧಾರಿತ ಕುಕ್‌ಟಾಪ್ ಹಾಗೂ ಬಳಸಿದ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿರುವ ವಸ್ತ್ರಗಳನ್ನು ಬಿಡುಗಡೆ ಮಾಡಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
