ಕಲೆ, ಶಿಕ್ಷಣ, ಕೈಗಾರಿಕೆ, ಸಾಹಿತ್ಯ, ವಿಜ್ಞಾನ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನವನ್ನು ಒಳಗೊಂಡಂತೆ ವಿವಿಧ ಕಾರ್ಯಕ್ಷೇತ್ರಗಳಲ್ಲಿ ವಿಶೇಷ ಕೊಡುಗೆಯನ್ನು ಗೌರವಿಸಲು ಭಾರತ ಸರ್ಕಾರ ನೀಡುವ ನಾಲ್ಕನೇ ಅತಿದೊಡ್ಡ ನಾಗರಿಕ ಪ್ರಶಸ್ತಿ ಪದ್ಮಶ್ರೀ . ಈ ಪ್ರಶಸ್ತಿಯನ್ನು ಈ ಹಿಂದೆ 2018ರಲ್ಲಿ ನರೇಂದ್ರ ಮೋದಿ ಸರ್ಕಾರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿ ಘೋಷಿಸಿತ್ತು. ಆದ್ರೆ, ಸಿದ್ದೇಶ್ವರ ಸ್ವಾಮೀಜಿ ವಿನಮೃವಾಗಿಯೇ ನಿರಾಕರಿಸಿದ್ದರು.
ಈ ಬ್ಗಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ನಡೆದಾಡುವ ದೇವರು, ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದು ಪ್ರಶಸ್ತಿಯನ್ನು ನಿರಾಕರಿಸಿದ್ದರು.
ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆಅವರು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳಿದ್ದ ಮಾತು ಇದು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
