ವ್ಯಾಲೆಂಟೈನ್ಸ್ ಡೇ ವಾರ ಶುರುವಾಗಿದೆ. ಒನ್ ಸೈಡ್ ಲವರ್ ಗಳು ಪ್ರಪೋಸ್ ಮಾಡಲು ರೆಡಿಯಾಗುತ್ತಿದ್ದರೆ…ಈಗಾಗಲೇ ಪ್ರೀತಿಸುತ್ತಿರುವ ಜೋಡಿಗಳು ತಮ್ಮ ಪ್ರೇಮಿಗಳಿಗೆ ವಿಭಿನ್ನ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಆದರೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಆಚರಿಸಲು ಮನವಿ ಮಾಡಿದೆ. ಫೆಬ್ರವರಿ 14 ರಂದು ‘ಹಸು ಅಪ್ಪುಗೆಯ ದಿನ’ ಆಚರಿಸಲು ದೇಶದ ಜನರನ್ನು ಕೇಳಿದೆ. ಹಸುವನ್ನು ತಬ್ಬಿ ಮೂಕಪ್ರಾಣಿಗಳಿಗೆ ಪ್ರೀತಿಯನ್ನು ವ್ಯಕ್ತಪಡಿಸಲು ಸೂಚಿಸಲಾಗಿದೆ.
ಪ್ರಾಣಿ ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. “ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಜೀವವೈವಿಧ್ಯವನ್ನು ಪ್ರತಿನಿಧಿಸುತ್ತದೆ. ಕಾಮಧೇನುವನ್ನು ಗೌಮಾತೆ ಎಂದು ಕರೆಯುತ್ತಾರೆ, ಏಕೆಂದರೆ ಅವಳು ಮನುಕುಲಕ್ಕೆ ಎಲ್ಲವನ್ನೂ ನೀಡುವ ತಾಯಿಯ ಪೋಷಣೆಯ ಸ್ವಭಾವವನ್ನು ಹೊಂದಿದ್ದಾಳೆ.” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
“ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಗತಿಯಿಂದಾಗಿ ನಮ್ಮ ಕಾಲದಲ್ಲಿ ವೈದಿಕ ಸಂಪ್ರದಾಯಗಳು ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಮಿಂಚು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆಯುವಂತೆ ಮಾಡಿದೆ. ಗೋವಿನ ಅಗಾಧ ಪ್ರಯೋಜನಗಳನ್ನು ಗಮನದಲ್ಲಿಟ್ಟುಕೊಂಡು.. ಹಸುವನ್ನು ಅಪ್ಪಿಕೊಳ್ಳುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ಹೆಚ್ಚಿಸುತ್ತದೆ. ಗೋವಿನ ಮಹತ್ವವನ್ನು ಗಮನದಲ್ಲಿಟ್ಟುಕೊಂಡು.. ಎಲ್ಲಾ ಗೋಪ್ರೇಮಿಗಳು ಫೆಬ್ರವರಿ 14 ಅನ್ನು ಹಗ್ ಹಗ್ ಡೇ ಎಂದು ಸಹ ಆಚರಿಸಬಹುದು. ಜೀವನದಲ್ಲಿ ಸಂತೋಷ ಮತ್ತು ಧನಾತ್ಮಕ ಶಕ್ತಿ ತುಂಬಬಹುದು…” ಎಂದು ತಿಳಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
