ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳಿಗೆ ಪ್ರಾಚೀನತೆಯ ಪ್ರತೀಕಗಳಿರುತ್ತದೆ. ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ.
ಪ್ರತಿ ಸಂವತ್ಸರದಲ್ಲಿ, ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು, ರಾತ್ರಿ ವೇಳೆಯಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಆ ಸಮಯದಲ್ಲಿ ಅಂದ್ರೆ ಶಿವರಾತ್ರಿಯಂದು ರಾತ್ರಿಯ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ.
ಅಂದು ಈಶ್ವರನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆದುಕೊಳ್ಳುತ್ತಾನೆ ಎಂಬ ಪ್ರತೀತಿ ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿದೆ. ಅಂದು ಪ್ರಾತಃಕಾಲದಲ್ಲಿಯೇ ಎದ್ದು, ಸ್ನಾನ ಮಾಡಿ, ಮಡಿ ವಸ್ತ್ರ ತೊಟ್ಟು, ಉಪವಾಸವಿದ್ದು, ಶಿವದೇವಾಲಯಗಳಿಗೆ ತೆರಳಿ, ಶಿವಾರ್ಚನೆ ಮಾಡಿದರೆ ಮತ್ತು ರಾತ್ರಿಯಿಡೀ ಜಾಗರಣೆ ಮಾಡಿ ಶಿವನ ಪೂಜೆ ಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ.
ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣವೂ ಇದೆ. ಶಿವರಾತ್ರಿ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಿಗೆ ಕಾಲವು ಪ್ರಾರಂಭಗೊಳ್ಳುವುದು. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ ಮಾಡುತ್ತೇವೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
