fbpx
ಸಮಾಚಾರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ; ಇತಿಹಾಸ ಮತ್ತು ಮಹತ್ವದ ಮಾಹಿತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರತಿ ವರ್ಷ ಮಾರ್ಚ್ 8;ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನವನ್ನು ಹೊಸ ಬಗೆಯ ಥೀಮ್ ನೊಂದಿಗೆ ಆಚರಿಸಲಾಗುತ್ತದೆ. ನಾವು ಈಗ  48ನೇ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ನೇರಳೆ ಬಣ್ಣವು ಪ್ರಪಂಚದಾದ್ಯಂತ ಮಹಿಳಾ ದಿನವನ್ನು ಸಂಕೇತಿಸಲು ಬಳಸಲ್ಪಡುತ್ತದೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಯ ಇತಿಹಾಸ ಫೆಬ್ರವರಿ 28, 1909 ರಿಂದ ಆರಂಭವಾಯಿತು.‌ವಿಶ್ವದಾದ್ಯಂತದ ಮೊದಲ ಅಧಿಕೃತ ಆಚರಣೆಗಳು 1911 ರಲ್ಲಿ ನಡೆದವು.

1908ರ ಫೆಬ್ರವರಿಯಲ್ಲಿಯೇ ಅಂತಾರಾಷ್ಟ್ರೀಯ  ಮಟ್ಟದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು.

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು.  ದುಡಿಯುವ ಮಹಿಳೆಯರು  ಅವರ ಹಕ್ಕಿನ ಪರವಾಗಿ ಧ್ವನಿಯೆತ್ತಿದ್ದರು‌ ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು.

ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು ರಾಲಿಗಳನ್ನು ನಡೆಸಿದರು. ಇದೇ ಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು.

1975ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ಮಾರ್ಚ್​ 8 ರಂದು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆಗೆ ತಂದಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top