ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನೆನ್ನೆಯಿಂದ ಟೋಲ್ ಸಂಗ್ರಹ ಆರಂಭವಾಗಿದ್ದು, ಇದೀಗ ಈ ಮಾರ್ಗದಲ್ಲಿ ಓಡಾಡುವ ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರ ಟಿಕೆಟ್ ದರವನ್ನು ಹೆಚ್ಚಿಸಲಾಗಿದ್ದು, ಟೋಲ್ ಶುಲ್ಕದ ಹೊರೆಯನ್ನು ಪ್ರಯಾಣಿಕರ ಮೇಲೆ ಹಾಕಿದ್ದಾರೆ.
ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದ್ದು, ಎಕ್ಸ್‌ಪ್ರೆಸ್‌ವೇಯ ಮೊದಲ ಹಂತದ ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿನ ಕಣಿಮಿಣಿಕೆ ಟೋಲ್ ಮುಖಾಂತರ ಸಂಚರಿಸುವ ಬಸ್ಸುಗಳಿಂದ ಮಾರ್ಚ್ 14ರಿಂದಲೇ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಾರಂಭಿಸಿದೆ.
ಈ ವೆಚ್ಚ ಸರಿದೂಗಿಸಲು ಟೋಲ್ ಶುಲ್ಕದ ಹೊರೆಯನ್ನು ಪ್ರಯಾಣಿಕರ ಹೆಗಲಿಗೆ ಹೊರಿಸಲಾಗಿದೆ. ಎಕ್ಸ್‌ಪ್ರೆಸ್‌ವೇ ಮೂಲಕ ಸಂಚರಿಸುವ ನಿಗಮದ ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ ತಲಾ 18 ರೂ. ಹಾಗೂ ಮಲ್ಟಿ ಆಕ್ಸಲ್ ಅಥವಾ ಇತರೇ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ತಲಾ 20 ರೂ. ಅನ್ನು ಬಳಕೆದಾರರ ಶುಲ್ಕವನ್ನಾಗಿ (ಟೋಲ್) ಸಂಗ್ರಹಿಸುವುದು ಅನಿವಾರ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
