fbpx
ಸಮಾಚಾರ

ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ! ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾದ ನಟ ಚೇತನ್

ಇತ್ತೀಚಿನ ದಿನಗಳಲ್ಲಿ ನಾವು ಗಾಂಜಾ ಎಂಬ ಪದವನ್ನು ಹಲವು ಬಾರಿ ಕೇಳುತ್ತಿದ್ದೇವೆ. ಬಿಗ್ ಬಾಸ್ ಸ್ಪರ್ಧಿ ರಾಕೇಶ್ ಅಡಿಗ ಕೂಡ ಈ ವಿಷಯದ ಕುರಿತು ಈ ಹಿಂದೆ ಮಾತನಾಡಿದ್ದರು. ಇದೀಗ ಮತ್ತೊಮ್ಮೆ ನಟ ಚೇತನ್ ಗಾಂಜಾ ವಿಷಯದ ಕುರಿತು ಮಾತನಾಡುತ್ತ ಸುದ್ದಿಯಾಗುತ್ತಿದ್ದಾರೆ.

ನಟ ಚೇತನ್ ಒಂದಲ್ಲ ಒಂದು ವಿಚಾರದಲ್ಲಿ ಯಾವಾಗಲು ಸುದ್ದಿಯಾಗುತ್ತಿರುತ್ತಾರೆ. ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ರಾಕೇಶ್ ಅಡಿಗ ಹೇಳಿಕೆ ಕೊಟ್ಟಾಗ ಅದು ಬಹಳಷ್ಟು ವಿಕೋಪಕ್ಕೆ ಏರಿತು. ಇದಲ್ಲದೆ ಸಿನಿಮಾ ರಂಗದಲ್ಲಿ ಡ್ರಗ್ಸ್ ವಿಚಾರ ಕೂಡ ಬಹಳಷ್ಟು ಚರ್ಚೆಯಾಗುತ್ತಿದೆ. ಇವೆಲ್ಲದರ ನಡುವೆ ಇದೀಗ ನಟ ಚೇತನ್ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ಬರೆದುಕೊಂಡಿದ್ದಾರೆ.

ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸುಖು ಗಾಂಜಾ ವಿಚಾರವಾಗಿ ಮಾತನಾಡಿರುವುದನ್ನು ಅನುಮೋದಿಸಿರುವ ಚೇತನ್, ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು ಎಂದಿದ್ದಾರೆ. ಸುಖವಿಂದರ್ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಲು ಯೋಜಿಸಿರುವುದನ್ನು ಚೇತನ್ ಬೆಂಬಲಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್, ‘ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ. ಉತ್ತರಾಖಂಡ, ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಕರ್ನಾಟಕವೂ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು’ ಎಂದಿದ್ದಾರೆ. ಇದಲ್ಲದೆ ಇದರಿಂದ ಸರ್ಕಾರಕ್ಕೆ ಯಾವ ರೀತಿ ಲಾಭವಾಗುತ್ತದೆ ಎಂಬುದನ್ನು ಯೋಚಿಸಬೇಕು ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top