ಸುದೀಪ್ ಅವರು ನಟನೆಯ ಹೆಬ್ಬುಲಿ ಚಿತ್ರದ ಪಾತ್ರಕ್ಕಾಗಿ ವಿಶಿಷ್ಟ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದರು. ಆ ಸಮಯದಿಂದ ಹಿಡಿದು ಈಗಿನವರೆಗೂ ಆ ಚಿತ್ರದ ಹೇರ್ ಸ್ಟೈಲ್ ಮಕ್ಕಳಿಂದ ಯುವಕರಿಗೂ ಅಚ್ಚು ಮೆಚ್ಚು. ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಶಾಂತರಾಜು ಸವಿತಾ ಸಮಾಜದ ಸಂಘದ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
‘ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ತಮ್ಮ ಸಂಘದ ಸದಸ್ಯರ ಕಟಿಂಗ್ ಶಾಪ್‌ಗಳಲ್ಲಿ ಶಾಲಾ ಮಕ್ಕಳು ಹೆಬ್ಬುಲಿ ಕಟಿಂಗ್ ಮಾಡಿಸಲು ಕೇಳಿದರೆ ದಯವಿಟ್ಟು ಮಾಡಬೇಡಿ. ನಾವು ತರಗತಿಯಲ್ಲಿ ಈ ರೀತಿ ಕಟಿಂಗ್ ಮಾಡಿಸಬೇಡಿ ಎಂದು ತಿಳಿಸಿದ್ದರೂ, ಪೋಷಕರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು ಈ ರೀತಿ ಕಟಿಂಗ್ ಮಾಡಿಸಿಕೊಂಡು ಬರುವುದು ನಮ್ಮನ್ನು ಅಪಹಾಸ್ಯ ಮಾಡುವಂತಿದೆ. ಅಣಕಿಸುವಂತಿದೆ. ಆದ್ದರಿಂದ ಈ ಬಗ್ಗೆ ತಮ್ಮ ಸಂಘದ ಸದಸ್ಯರು ಹೆಬ್ಬುಲಿ ಕಟಿಂಗ್ ಮಾಡಬಾರದಾಗಿ ಆದೇಶ ನೀಡವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಶಾಂತರಾಜು ಪತ್ರದಲ್ಲಿ ತಿಳಿಸಿದ್ದಾರೆ. ಶಿಕ್ಷಕ ಶಾಂತರಾಜು ಬರೆದಿರುವ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
